ಕಲ್ಪ ಮೀಡಿಯಾ ಹೌಸ್ | ಕಡಬ |
ದೈವ ನರ್ತನ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ನರ್ತಕರೊಬ್ಬರು ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಡಬ ಸಮೀಪ ಎಡಮಂಗಲ ಗ್ರಾಮದಲ್ಲಿ ಘಟನೆ ನಡೆದಿದ್ದು, ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರು. ನರ್ತನ ಮಾಡುತ್ತಿರುವ ವೇಳೆಯೇ ಕುಸಿದು ಬಿದ್ದ ದೃಶ್ಯ ಮೊಬೈಲ್’ನಲ್ಲಿ ಸೆರೆಯಾಗಿದೆ.

ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮ ದೈವಗಳ ಪರಿಚಾರಕರಾಗಿ ಸೇವ ಸಲ್ಲಿಸುತ್ತಿದ್ದರು.












Discussion about this post