ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಾಲೂಕು ಮಟ್ಟದ ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ (Writing Competition) ಕಾಕೋಳು ಸರ್ಕಾರಿ ಪ್ರೌಢಶಾಲೆಯ (Kakolu School) ವಿದ್ಯಾರ್ಥಿನಿ ಕುಮಾರಿ ಅದ್ವಿಕಾ ಆರ್. ಅವರು ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಬೆಂಗಳೂರು ಉತ್ತರ ವಲಯ-4ರ ವ್ಯಾಪ್ತಿಯ ಎಲ್ಲಾ ಕ್ಲಸ್ಟರ್ಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅದ್ವಿಕಾ ಅವರು ತಮ್ಮ ಸೃಜನಶೀಲ ಬರವಣಿಗೆ ಹಾಗೂ ವಿಶಿಷ್ಟ ಪ್ರತಿಭೆಯ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ತಮ್ಮ ಬರವಣಿಗೆಯ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ
ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಅದ್ವಿಕಾ ಆರ್. ಅವರು ಇದೀಗ ಬೆಂಗಳೂರು ಜಿಲ್ಲಾ ಮಟ್ಟದ ಸೃಜನಾತ್ಮಕ ಬರವಣಿಗೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಸಾಧನೆ ಮಾಡಲಿ ಎಂಬ ಆಶಯವನ್ನು ಶಾಲೆಯ ಶಿಕ್ಷಕರು ವ್ಯಕ್ತಪಡಿಸಿದ್ದಾರೆ.
Kakolu School: ಶಾಲಾ ಆಡಳಿತ ಮಂಡಳಿಯಿಂದ ಅಭಿನಂದನೆ
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಆರ್. ವಿಜೇತ ಹಾಗೂ ಸರ್ವ ಸದಸ್ಯರು ಕೂಡ ಅದ್ವಿಕಾ ಅವರ ಪ್ರತಿಭೆ ಮತ್ತು ಸಾಧನೆಯನ್ನು ಶ್ಲಾಘಿಸಿ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿನಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಿದ ಶಿಕ್ಷಕರ ಕಾರ್ಯವನ್ನೂ ಈ ಸಂದರ್ಭದಲ್ಲಿ ಪ್ರಶಂಸಿಸಲಾಗಿದೆ.
Also Read>> ದೀಪಾವಳಿಗೆ ಮಿಂಚಿದ ಬುರ್ಜ್ ಖಲೀಫಾ: ಭಾರತೀಯರಿಗೆ ಯುಎಇ ಅಧ್ಯಕ್ಷರಿಂದ ಶುಭಾಶಯ
ಜಿಲ್ಲಾ ಮಟ್ಟದಲ್ಲೂ ಯಶಸ್ಸು ಸಿಗಲಿ
ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಪಾಂಚಜನ್ಯ ಪ್ರತಿಷ್ಠಾನದ ಸಂಸ್ಥಾಪಕ ಟ್ರಸ್ಟಿ ಮುರಳಿ ಕಾಕೋಳು ಅವರು, ಅದ್ವಿಕಾ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಅವರು ಉತ್ತಮ ಸಾಧನೆ ಮಾಡಿ ಶಾಲೆಗೆ ಹಾಗೂ ಪ್ರದೇಶಕ್ಕೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಯಿಂದ ಕಾಕೋಳು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯರಲ್ಲಿ ಸಂತಸ ಮನೆಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









