ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಭೀಕರ ಬಸ್ ಅಪಘಾತದಲ್ಲಿ Bus accident ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಹೃದಯವಿದ್ರಾವಕ ಘಟನೆ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೂರು ಕುಟುಂಬಗಳ ಒಟ್ಟು 29 ಜನ ಹೈದರಾಬಾದ್‌ನಿಂದ ಗೋವಾಕ್ಕೆ ಪ್ರವಾಸ ತೆರಳಿದ್ದರು ವಾಪಾಸಾಗುವ ಮಾರ್ಗ ಮಧ್ಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಸಜೀವ ದಹನವಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.
ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, 22 ಜನರು ಬಸ್‌ನಿಂದ ಹೊರ ಬಂದಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ರಕ್ಷಣಾ ಪಡೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಬಸ್ ಸಂಪೂರ್ಣ ಸುಟ್ಟ ಕರಲಾಗಿದೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಟೆಂಪೊ ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post