ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಮಹಾರಾಷ್ಟ್ರದ ಸೋಲಾಪುರದಲ್ಕಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ Indian Airforce ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರಿಗೆ ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.
ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ಡಾ. ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ವಿಶಾಲ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಚ ನೀಡಿ ಪ್ರಧಾನಮಂತ್ರಿಗಳನ್ನು ಬರಮಾಡಿಕೊಂಡರು.

Also read: ಶಿವಮೊಗ್ಗ ಎಫ್’ಎಂಗೆ ಇಂದು ಸಂಜೆ ಪ್ರಧಾನಿ ಮೋದಿ ಶಿಲಾನ್ಯಾಸ
ನಂತರ ಪ್ರಧಾನಮಂತ್ರಿಗಳು ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post