No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕಲಬುರಗಿ

ಶೀಘ್ರದಲ್ಲೇ ಕಲಬುರಗಿಯಲ್ಲಿ ಜವಳಿ ಪಾಕ್೯: ಸಚಿವ ನಿರಾಣಿ ಘೋಷಣೆ

ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮ

kalpa News by kalpa News
January 3, 2022
in ಕಲಬುರಗಿ
0
ಶೀಘ್ರದಲ್ಲೇ ಕಲಬುರಗಿಯಲ್ಲಿ ಜವಳಿ ಪಾಕ್೯: ಸಚಿವ ನಿರಾಣಿ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕಲಬುರಗಿ  |

ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರ ಕಲಬುರಗಿಯಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ಕಾರಣಕ್ಕಾಗಿ ಈ ಭಾಗದಲ್ಲಿ ಜವಳಿ ಪಾಕ್೯ (ಟೆಕ್ಸ್ ಟೈಲ್) ಪ್ರಾರಂಭಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಘೋಷಿಸಿದರು.

ಸೋಮವಾರ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ನಡೆದ ಉದ್ಯಮಿಯಾಗು ,ಉದ್ಯೋಗ ನೀಡು ಹಾಗೂ ಕೈಗಾರಿಕಾ ಆದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂಬಂಧ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆಯನ್ನು ನಡೆಸಲಾಗಿದ್ದು, ಕೇಂದ್ರದಿಂದ ನಮಗೆ ಸಕಾರಾತ್ಮಕ ಸ್ಪಂಧಿಸಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಬೀದರ್ ಸೇರಿದಂತೆ ಈ ಸುತ್ತಮುತ್ತಲ ಜಿಲ್ಲೆಗಳಲ್ಲಿ ಹತ್ತಿಯನ್ನು ಯಥೇಚ್ಚವಾಗಿ ಬೆಳೆಯುತ್ತಾರೆ. ಇಲ್ಲಿ ಜವಳಿ ಪಾರ್ಕ್ ಪ್ರಾರಂಭವಾದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಜವಳಿ ಪಾರ್ಕ್ ಪ್ರಾರಂಭಿಸಲು ಬರುವವರಿಗೆ ಸರ್ಕಾರ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಿದೆ. ಅವರಿಗೆ ಪವನ ಹಾಗೂ , ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವವರಿಂದ ರಿಯಾಯ್ತಿ ದರದಲ್ಲಿ ವಿದ್ಯುತ್ ನೀಡುವುದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದಲೇ ತರಬೇತಿ ನೀಡಿ ನುರಿತ ಕೌಶಲ್ಯ ಕಾರ್ಮಿಕರನ್ನು ಒದಗಿಸಲಿದ್ದೇವೆ ಎಂದು ಆಶ್ವಾಸನೆ ನೀಡಿದರು.

ಜವಳಿ ಪಾರ್ಕ್ ಆರಂಭವಾದರೆ ಹತ್ತಿ ನೂಲುವುದು, ಬೀಜ ತೆಗೆಯುವುದು ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡಲು ಸಹಾಯವಾಗುತ್ತದೆ. ಟೆಕ್ಸ್ ಟೈಲ್ ಪಾರ್ಕ್ ಆರಂಭಿಸಲು ಮುಂದೆ ಬರುವ ಉದ್ಯಮಿಗಳಿಗೆ ಸರ್ಕಾರ ಅನೇಕ ರೀತಿಯ ನೆರವುಗಳನ್ನು ನೀಡಲಿದೆ ಎಂದು ಭರವಸೆ ಕೊಟ್ಟರು.

ಈ ಭಾಗವನ್ನು ಟೆಕ್ಸ್ ಟೈಲ್ ಹಬ್ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ. ಕೈಗಾರಿಕೆಗಳನ್ನು ಪ್ರಾರಂಭಿಸಲು ಬರುವ ಉದ್ಯಮಿಗಳಿಗೆ ಅಗತ್ಯವಾದ ನೀರು, ರಸ್ತೆ, ವಿದ್ಯುತ್, ಭೂಮಿ ಎಲ್ಲವನ್ನು ಕಾಲಮಿತಿಯೊಳಗೆ ನೀಡಲಿದೆ. ಉದ್ಯಮಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಕಲಬರುಗಿಯಲ್ಲಿ ಒಟ್ಟು 1600 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಗಳಿಗೆ ಗುರುತಿಸಲಾಗಿದೆ. ಶೀಘ್ರದಲ್ಲೇ ಇದರ ಭೂ ಸ್ವಾಧೀನ ಪ್ರಕ್ರಿಯೆಯು ಆರಂಭವಾಗಲಿದೆ. ಇದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಲು ಮುಂದೆ ಬರುವವರ ಸಂಖ್ಯೆ ಅಧಿಕವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಲು ದೇಶ-ವಿದೇಶಗಳಿಂದ ದೊಡ್ಡ ಮಟ್ಟದಲ್ಲಿ ಉದ್ಯಮಿಗಳು ಆಗಮಿಸುತ್ತಾರೆ. ಆದರೆ ನಮ್ಮವರೇ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ ಎಂದರೆ ತುಂಬ ಬೇಸರವಾಗುತ್ತದೆ. ಈ ಭಾಗದಲ್ಲಿ ಅನೇಕರು ಆರ್ಥಿಕವಾಗಿ ಸಾಕಷ್ಟು ಪ್ರಬಲರಾಗಿದ್ದಾರೆ. ನೀವು ಉದ್ಯಮ ಆರಂಭಿಸಲು ಮುಂದೆ ಬಂದರೆ ಸರ್ಕಾರ ನಿಮಗೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಅಭಯ ನೀಡಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೈಗಾರಿಕಾ ನೀತಿಯು ಇಡೀ ದೇಶಕ್ಕೆ ಮಾದರಿಯಾಗಿದೆ. ಇದು ಉದ್ಯಮಿಗಳಿಗೆ ಮತ್ತು ಹೊಸದಾಗಿ ಆರಂಭಿಸುವವರಿಗೆ ಎಲ್ಲ ರೀತಿಯ ಸಹಾಯ ಒದಗಿಸಲಿದೆ. ಇದಕ್ಕೂ ಮುನ್ನ ಕೆಲವು ಯಶಸ್ವಿ ಉದ್ಯಮಿಗಳು, ಪರಿಣತರು, ಸೇರಿದಂತೆ ಮತ್ತಿತರರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಯುವ ಸಮೂಹವನ್ನು ಉದ್ಯಮದತ್ತ ಆಕರ್ಷಿಸುವುದು, ಉದ್ಯಮ ಆರಂಭಿಸುವವರಿಗೆ ಇರುವ ವಲಯಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಬಂಡವಾಳ ಹೂಡಿಕೆ , ಬ್ಯಾಂಕ್ ನಿಂದ ಸಾಲ ಸೌಲಭ್ಯ ಯಶಸ್ವಿ ಉದ್ಯಮಿಗಳ ಯಶೋಗಾಥೆ, ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಉದ್ಯಮಿದಾರರು ಪರಸ್ಪರ ವಿನಿಮಯ ಮಾಡಿಕೊಂಡರು.

ಇನ್ಫೋಸಿಸ್ ನ ಸುಧಾನಾರಾಯಣ ಮೂರ್ತಿ, ವಿಅರ್ ಎಲ್ ಸಮೂಹ ಸಂಸ್ಥೆಯ ವಿಜಯ ಸಂಕೇಶ್ವರ ಹಾಗೂ ಹಲವಾರು ಯುವ ಉದ್ಯಮಿಗಳು ಯಶಸ್ವಿಯಾಗಿರುವುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಸಭಿಕರಿಂದ ಚಪ್ಪಾಳೆ ಹಾಗೂ ಹರ್ಷದ್ಗೋರ ಮುಗಿಲು ಮುಟ್ಟಿತ್ತು. ಪವರ್ ಸ್ಡಾರ್ ಪುನೀತ್ ರಾಜ್ ಕುಮಾರ್ ಈ ವೇದಿಕೆಯು ಹಲವಾರು ಯುವ ಉದ್ಯಮಿಗಳಿಗೆ ಒಂದು ಉಪಯುಕ್ತ ವೇದಿಕೆಯಾಗಿ ಪರಿಣಮಿಸಿದ್ದು ಸುಳ್ಳಲ್ಲ.

ಕಾರ್ಯಕ್ರಮದಲ್ಲಿ ಕಲಬುರಗಿ ಲೋಕಸಭಾ ಸಂಸದ ಡಾ.ಉಮೇಶ್ ಜಾಧವ್, ಶಾಸಕರಾದ ಬಸವರಾಜ್ ಮತ್ತಿಮೊಡ, ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ಅಪ್ಪುಗೌಡ ಪಾಟೀಲ್ ರೇವೂರ, ವಿಧಾನಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಜಿ.ಟಿ.ಪಾಟೀಲ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಆಯುಕ್ತೆ, ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಶಿವಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Gulbarga UniversityKalaburugiKannada NewsKannada News LiveKannada News OnlineKannada News WebsiteKannada WebsiteLatest News KannadaMinister Murugesh NiraniNews in KannadaNews KannadaState NewsTextile Parkಕಲಬುರಗಿಗುಲಬರ್ಗಾ ವಿಶ್ವವಿದ್ಯಾಲಯಜವಳಿ ಪಾಕ್೯ಸಚಿವ ಮುರುಗೇಶ್ ನಿರಾಣಿ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ಮೇಕೆದಾಟು ಹೋರಾಟ: ಡಿ.ಕೆ. ಶಿವಕುಮಾರ್ ಹೇಳಿಕೆ

Next Post

ಶಾರುಖ್ ಹೆಸರು ಹೇಳಿದ್ದಕ್ಕೆ ತೊಂದರೆಯಲ್ಲಿದ್ದ ಅಭಿಮಾನಿಗೆ ಈಜಿಪ್ಟ್’ನಲ್ಲಿ ದೊರೆಯಿತು ಸಹಾಯ

kalpa News

kalpa News

Next Post
ಶಾರುಖ್ ಹೆಸರು ಹೇಳಿದ್ದಕ್ಕೆ ತೊಂದರೆಯಲ್ಲಿದ್ದ ಅಭಿಮಾನಿಗೆ ಈಜಿಪ್ಟ್’ನಲ್ಲಿ ದೊರೆಯಿತು ಸಹಾಯ

ಶಾರುಖ್ ಹೆಸರು ಹೇಳಿದ್ದಕ್ಕೆ ತೊಂದರೆಯಲ್ಲಿದ್ದ ಅಭಿಮಾನಿಗೆ ಈಜಿಪ್ಟ್'ನಲ್ಲಿ ದೊರೆಯಿತು ಸಹಾಯ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL