ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಹೊಟ್ಟೆನೋವಿನಿಂದ13 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಶುಕ್ರವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದರು. ಹೊಟ್ಟೆನೋವಿನಿಂದ ಬಾಲಕಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ.
Also read: ಲಡಾಖ್: ಹಠಾತ್ ಪ್ರವಾಹಕ್ಕೆ ಸಿಲುಕಿ ಐವರು ಯೋಧರು ಹುತಾತ್ಮ
ಸರ್ಫರಾಜ್ ಎಂಬಾತ ಜೀವ ಬೆದರಿಕೆ ಹಾಕಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಸರ್ಫರಾಜ್ ಮಿರ್ಜಾನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post