ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಕೈಹಿಡಿದ ಪತ್ನಿ ಹಾಗೂ ಜನ್ಮಕೊಟ್ಟ ಇಬ್ಬರು ಪುಟ್ಟ ಕಂದಮ್ಮಗಳನ್ನು ಸ್ವತಃ ಕೊಂದು, ಆನಂತರ ತಾನೂ ಸಹ ಪತಿಯೊಬ್ಬ ಆತ್ಮಹತ್ಯೆಗೆ #Suicide ಶರಣಾಗಿರುವ ಘಟನೆ ನಗರದ ಗಾಬರೆ ಲೇಔಟ್ ಅಪಾಟ್ಮೆಂಟ್’ವೊಂದರಲ್ಲಿ ನಡೆದಿದೆ.
ಮೃತರನ್ನು ಸಂತೋಷ್ ಕೊರಳ್ಳಿ(45), ಶೃತಿ (35), ಮಕ್ಕಳನ್ನು ಮುನಿಶ್ (9), ಮೂರು ತಿಂಗಳ ಮಗುವನ್ನು ಅನಿಶ್ ಎಂದು ಗುರುತಿಸಲಾಗಿದೆ.
ಪತ್ನಿ ಹಾಗೂ ಮಕ್ಕಳನ್ನು ಮೊದಲು ಕೊಲೆ ಮಾಡಿ, ನಂತರ ಸಂತೋಷ್ ಮನೆಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
Also read: ಭಾರತೀಯ ಸೇನೆಯ ಜಾಗ್ವಾರ್ ಯುದ್ಧ ವಿಮಾನ ಪತನ | ಓರ್ವ ಪೈಲಟ್ ಹುತಾತ್ಮ
ಗಂಡ-ಹೆಂಡತಿ ಮಧ್ಯೆ ಆಗಾಗ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತ ಸಂತೋಷ್ ಕೊರಳ್ಳಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post