ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಲೋಕಸಭಾ ಚುನಾವಣೆ Parliament Election ಹಿನ್ನೆಲೆಯಲ್ಲಿ ಮಾರ್ಚ್ 16ರ ನಾಳೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ನಗರಕ್ಕೆ ಆಗಮಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಅವರ ತವರಿನಿಂದಲೇ ರಣಕಹಳೆ ಊದಲಿದ್ದಾರೆ.
ಎಐಸಿಸಿ ಅಧ್ಯಕ್ಷರ ತವರಿನಲ್ಲಿ ಕಾಂಗ್ರೆಸ್’ಗೆ ಟಕ್ಕರ್ ನೀಡಲು ಕಮಲ ಪಾಳಯ ಸಜ್ಜಾಗಿದ್ದು, ಪ್ರಧಾನಿ ಮೋದಿ ಅವರು ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮಾರ್ಚ್ 16 ರಂದು ಕಲಬುರಗಿಯ ಎನ್ ವಿ ಆಟದ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಶಿವಮೊಗ್ಗದ ಕಾರ್ಯಕ್ರಮವು ಮಾರ್ಚ್ 18 ರಂದು ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಅತ್ಯಂತ ಪ್ರಮುಖ ರಾಜ್ಯವಾಗಿದೆ.
Also read: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ | ಪ್ರಕರಣ ಸಿಐಡಿಗೆ ವರ್ಗಾವಣೆ
ಕಾಂಗ್ರೆಸ್ ಈ ಬಾರಿ 81 ವರ್ಷದ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಲಬುರಗಿಯಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಲಬುರಗಿ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಾಗಿದ್ದು, 2009 ಮತ್ತು 2014ರಲ್ಲಿ ಅಲ್ಲಿಂದಲೇ ಲೋಕಸಭೆಗೆ ಆಯ್ಕೆಯಾಗಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸೋತಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post