ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭಾರೀ ಭದ್ರತಾ ಲೋಪ ಸಂಭವಿಸಿದ್ದು, ಪೈಲೆಟ್‌ನ ಮುಂಜಾಗ್ರತೆಯಿಂದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ.
ಜಿಲ್ಲೆಯ ಜೇವರ್ಗಿ ಹೊರವಲಯದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಯಡಿಯೂರಪ್ಪ ಅವರು, ಕುಳಿತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುವ ವೇಳೆ ಬಹಳಷ್ಟು ಸಂಖ್ಯೆಯ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದು ಹೆಲಿಪ್ಯಾಡ್ ಮೇಲೆ ಬಿದ್ದಿವೆ. ಇದನ್ನು ತತಕ್ಷಣವೇ ಗಮನಿಸಿದ ಪೈಲೆಟ್ ಹೆಲಿಕಾಪ್ಟರ್ ಲ್ಯಾಂಡ್ ಮಾಡದೆ ಮತ್ತೆ ಮೇಲಕ್ಕೆ ಕಳುಹಿಸಿದ್ದಾರೆ. ಆ ನಂತರ ಮಾಹಿತಿ ತಿಳಿದ ಪೊಲೀಸರು ಹಾಗೂ ಸಿಬ್ಬಂದಿಗಳು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ ನಂತರ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿದೆ.
ಇಷ್ಟು ಸಂಖ್ಯೆಯ ಪ್ಲಾಸ್ಟಿಕ್ ಚೀಲಗಳು ಹಾರುತ್ತಿದ್ದ ವೇಳೆ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂದು ಹೇಳಲಾಗಿದೆ. ಪೈಲೆಟ್ ಮುಂಜಾಗೃತೆಯಿಂದಾಗಿ ಅದೃಷ್ಟವಶಾತ್ ಇದು ತಪ್ಪಿದೆ.
ಲ್ಯಾಂಡ್ ಆದ ನಂತರ ಯಡಿಯೂರಪ್ಪ ಅವರು ನಿಗಧಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















