ಕಲ್ಪ ಮೀಡಿಯಾ ಹೌಸ್
ಕಲಬುರ್ಗಿ: ನಗರದಲ್ಲಿ ಸಹಕಾರ ಇಲಾಖೆ ಮತ್ತು ಡಿಸಿಸಿ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳು ಗೈರು ಹಾಜರಾದ ಪರಿಣಾಮ ಮುಖ್ಯಮಂತ್ರಿ ಯಡಿಯೂರಪ್ಪ ಕೋಪಗೊಂಡ ಘಟನೆ ನಡೆದಿದೆ.
ಮಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೂ ಹಿರಿಯ ಐಎಎಸ್ ಅಧಿಕಾರಿಗಳಾದ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ನಿಬಂಧಕ ಜಿಯಾ ಉಲ್ಲಾ ಆಗಮಿಸಿರಲಿಲ್ಲ. ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಂದ ಮಾಹಿತಿ ಕೇಳುತ್ತಿರುವಾಗ ಇಲಾಖೆಯ ಇತರ ಅಧಿಕಾರಿಗಳು ಐಎಎಸ್ ಅಧಿಕಾರಿಗಳು ಬಂದಿಲ್ಲ ಎಂಬ ಉತ್ತರ ನೀಡಿದ್ದಾರೆ. ಶಿಷ್ಟಾಚಾರ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಏಕೆ ಬಂದಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post