ಕಲ್ಪ ಮೀಡಿಯಾ ಹೌಸ್ | ಕನಕಪುರ |
ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ Minister Eshwar Khandre ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯ ಡಿ.ಕೆ ಸುರೇಶ್ DKSuresh ಅವರು ಇಂದು ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಾಂಕೇತಿಕವಾಗಿ 15 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು. ಮೃತರ ಪತ್ನಿ ಮತ್ತು ಕುಟುಂಬದವರಿಗೆ ಬ್ಯಾಂಕ್ ಖಾತೆ ಇಲ್ಲದ ಕಾರಣ ತಕ್ಷಣವೇ ಬ್ಯಾಂಕ್ ಖಾತೆ ತೆರೆಸಿ ಆರ್.ಟಿ.ಜಿ.ಎಸ್. ಮೂಲಕ ಹಣ ಜಮಾ ಮಾಡುವಂತೆ ಸಚಿವರು ಹಾಗೂ ಸಂಸದರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
Also read: ರೈಲು ದುರಂತದ ಹಿನ್ನೆಲೆ: ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರು ಹಾಜರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು











Discussion about this post