ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ/ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್’ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನನ್ನು #InterimBail ಹೈಕೋರ್ಟ್ ಮಂಜೂರು ಮಾಡಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಹೈಕೋರ್ಟ್, ಆರು ವಾರಗಳ ಕಾಲ ಮಾತ್ರ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #RenukaswamyMurderCase ಬಂಧನಕ್ಕೆ ಒಳಗಾದ ನಟ ದರ್ಶನ್’ಗೆ #ActorDarshan ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅಲ್ಲದೇ, ನಟ ದರ್ಶನ್ ಪಾಸ್’ಪೋರ್ಟ್ ಮಾನ್ಯ ನ್ಯಾಯಾಲಯಕ್ಕೆ ಒಪ್ಪಿಸುವಂತೆ ಷರತ್ತು ವಿಧಿಸಿದ ಹೈಕೋರ್ಟ್ ಆದೇಶ ನೀಡಿದೆ.
Also read: ಮಕ್ಕಳ ಪ್ರತಿಭೆ ಗುರುತಿಸುವುದು ನಮ್ಮೆಲ್ಲರ ಕರ್ತವ್ಯ: ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಚಬ್ಬಿ
ಹೈಕೋರ್ಟ್’ನಲ್ಲಿ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ಈ ವಾದಕ್ಕೆ ಎಸ್ಪಿಪಿ ಪ್ರಸನ್ನ ಕುಮಾರ್ ಪ್ರಸನ್ನ ಕುರ್ಮಾ ತೀವ್ರ ಆಕ್ಷೇಪಿಸಿದ್ದರು.








Discussion about this post