ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮ್ಮ ಕಾರು ಅಪಘಾತದಲ್ಲಿ #Accident ಮಹಿಳೆಯೊಬ್ಬರ ಸಾವಿಗೆ ಕಾರಣವಾಗಿದ್ದಾರೆ ಎಂದ ಆರೋಪದಲ್ಲಿ ಖ್ಯಾತ ನಟ ನಾಗಭೂಷಣ್ #ActorNagabhushan ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ನಿನ್ನೆ ತಡರಾತ್ರಿ ಕುಮಾರಸ್ವಾಮಿ ಲೇಔಟ್ #KumaraswamyLayout ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎನ್ನಲಾಗಿದೆ.
ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರೆ, ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಹಿನ್ನೆಲೆಯಲ್ಲಿ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದು, ಕೆಲವೇ ಗಂಟೆಗಳನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.
ನಾಗಭೂಷಣ್ ಹೇಳಿಕೆ ನೀಡಿರುವುದೇನು?
ಇನ್ನು, ಘಟನೆ ಕುರಿತಂತೆ ಸ್ವತಃ ನಾಗಭೂಷಣ್ ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.
ವರದಿಗಳಂತೆ, ನಿನ್ನ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್’ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post