ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಿಂಹಾದ್ರಿಯ ಸಿಂಹ ಸೇರಿ ಹಲವು ಉತ್ತಮ ಚಿತ್ರಗಳನ್ನು ನಿರ್ಮಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕ ಮತ್ತು ಕನ್ನಡ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಿ.ವಿಜಯ್ ಕುಮಾರ್ ವಿಧಿವಶರಾಗಿದ್ದರೆ.
ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಈ ಹಿಂದೆ ವಿಜಯ್ ಕುಮಾರ್ ಅವರು, ನಟ ವಿಷ್ಣುವರ್ಧನ್ ಅವರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದರು.
ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ವಿಜಯಕುಮಾರ್ ಅವರು ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ, ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post