No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

‘ಸೀತಾರಾಮ್ ಬಿನೋಯ್’: ವಿಜಯ ರಾಘವೇಂದ್ರರವರ 50ನೇ ಚಿತ್ರ

kalpa News by kalpa News
October 27, 2020
in ಸಿನೆಮಾ
0
‘ಸೀತಾರಾಮ್ ಬಿನೋಯ್’: ವಿಜಯ ರಾಘವೇಂದ್ರರವರ 50ನೇ ಚಿತ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

2020ರಲ್ಲಿ ಅನಿರೀಕ್ಷಿತವಾಗಿ ಎದುರಾದ ’ಕೊರೋನಾ’ ಮಹಾಮಾರಿಯ ಪ್ರಹಾರದಿಂದ ಬಹುತೇಕ ಎಲ್ಲಾ ಉದ್ಯಮಗಳು ಸಂಕಷ್ಟಕ್ಕೆ ಸಿಲುಕುವಂತಾಗಿದ್ದು ಇದರ ಪರಿಣಾಮ ಕನ್ನಡ ಚಿತ್ರೋದ್ಯಮಕ್ಕೂ ತಟ್ಟಿತ್ತು.

ಬಿಡುಗಡೆ ಸಿದ್ದವಾಗಿದ್ದ ಅನೇಕ ಚಿತ್ರಗಳು ಮುಂದೂಡಲ್ಪಟ್ಟವು, ಆರಂಭಗೊಂಡ ಎಷ್ಟೋ ಚಿತ್ರಗಳ ಚಿತ್ರೀಕರಣ ಸ್ಥಗಿತಗೊಳ್ಳುವಂತಾಯ್ತು. ಲಾಕ್ಡೌನ್ ತೆರವಿನ ನಂತರ ಚಿತ್ರೀಕರಣಕ್ಕೆ ಚಾಲನೆ ದೊರೆತಿರುವುದರಿಂದ ಕನ್ನಡ ಚಿತ್ರೋದ್ಯಮ ಇದೀಗ ಚೇತರಿಸಿಕೊಳ್ಳುತ್ತಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದ ನಡುವೆಯೂ ಅನುಭವಿ ಯುವಕರ ಬಳಗವೊಂದು ಚೊಚ್ಚಲವಾಗಿ ಸಿನಿಮಾ ನಿರ್ಮಾಣದ ಸಾಹಸಕ್ಕೆ ಕೈ ಹಾಕಿದ್ದು ಪ್ರಶಂಸಾರ್ಹ ಸಂಗತಿ.

ಈ ಹಿಂದೆ ಕನ್ನಡ -ತುಳು ಚಿತ್ರರಂಗದಲ್ಲಿ ಕೆಲಸ ಮಾಡಿರಿರುವ ಅನುಭವಿ ತಂತ್ರಜ್ಞರ ಬಳಗ ನಿರ್ಮಾಣ ಮಾಡಿರುವ ಚಿತ್ರ ಸೀತಾರಾಮ್ ಬಿನೋಯ್: ಕೇಸ್ ನಂ. 18 ಸಿನಿಮಾದ ಮುಖ್ಯ ಪಾತ್ರದಾರಿಯಾಗಿ ವಿಜಯ ರಾಘವೇಂದ್ರ ಬಣ್ಣ ಹಚ್ಚಿದ್ದಾರೆ, ಇದು ವಿಜಯ ರಾಘವೇಂದ್ರರವರ 50ನೇ ಚಿತ್ರ ಅನ್ನುವುದು ವಿಶೇಷ ಸಂಗತಿ.

ತಮ್ಮ ಪ್ರತೀ ಚಿತ್ರದಲ್ಲೂ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ವಿಜಯ ರಾಘವೇಂದ್ರರವರು ಈ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದು ಚಿತ್ರದ ಪೋಸ್ಟರ್ ಮೂಲಕ ಗೋಚರಿಸುತ್ತಿದೆ, ವಿಜಯದಶಮಿ ಹಬ್ಬದ ದಿನದಂದು ಈ ಚಿತ್ರದ ಪೋಸ್ಟರ್/ಫಸ್ಟ್‌ ಲುಕ್ ಬಿಡುಗಡೆ ಮಾಡುವುದರ ಮೂಲಕ ಡಾ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಿಷಬ್ ಶೆಟ್ಟಿ, ಶ್ರೀಮುರುಳಿ, ನಟಿ ಭಾವನ, ಪ್ರಜ್ವಲ್ ದೇವರಾಜ್ ಮುಂತಾದ ಸಿನಿತಾರೆಯರು ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಹಿಂದೆ ತುಳು ಚಿತ್ರರಂಗದಲ್ಲಿ ಕೆಲಸ ಮಾಡಿರುವ ’ದೇವಿ ಪ್ರಸಾದ್ ಶೆಟ್ಟಿ’ಯವರ ಚೊಚ್ಚಲ ನಿರ್ದೇಶನದ ಕನ್ನಡ ಚಿತ್ರವಾಗಿದ್ದು ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ, ಕನ್ನಡ -ತುಳು ಚಿತ್ರಗಳಲ್ಲಿ ನಟರಾಗಿ -ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ತೀರ್ಥಹಳ್ಳಿ ಮೂಲದ ಸಾತ್ವಿಕ್ ಹೆಬ್ಬಾರ್ ರವರು ’ಸೀತಾರಾಮ್ ಬಿನೋಯ್’ ಚಿತ್ರದ ಮೂಲಕ ನಿರ್ಮಾಪಕರಾಗಿ ಹೊರಹೊಮ್ಮಿದ್ದಾರೆ, ವಿಜಯ ರಾಘವೇಂದ್ರ ರವರ ಹಿಂದಿನ ಚಿತ್ರ ’ಮಾಲ್ಗುಡಿ ಡೇಸ್’ಗೆ ಸಂಗೀತ ನಿರ್ದೇಶನ ಮಾಡಿದ್ದ ಗಗನ್ ಬಡೇರಿಯಾರವರು ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ.

ಚಿತ್ರಕ್ಕೆ ಭವಾನಿ ಶಂಕರ್ ಕಲಾ ನಿರ್ದೇಶನ ಮಾಡಿದ್ದಾರೆ. ಹಲವು ತಮಿಳು -ತೆಲುಗು ಚಿತ್ರಗಳಲ್ಲಿ ಕೆಲಸ ಮಾಡಿರುವ ಹೇಮಂತ್ ಈ ಚಿತ್ರಕ್ಕೆ ಕ್ಯಾಮರಾ ಕಣ್ಣಾಗಿದ್ದಾರೆ, ಕನ್ನಡದ ಮಾಲ್ಗುಡಿ ಡೇಸ್, ತಮಿಳು -ತೆಲುಗು ಭಾಷೆಗಳಲ್ಲಿ ತೆರೆಕಂಡ ’ಯೂ ಟರ್ನ್’ ಚಿತ್ರಗಳಲ್ಲಿ ನಟರಾಗಿ -ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶಿವಮೊಗ್ಗದ ನುರಿತ ಕಲಾವಿದರೂ, ತಂತ್ರಜ್ಞರೂ ಅದ ಶಶಾಂಕ್ ನಾರಾಯಣ ಈ ಚಿತ್ರಕ್ಕೆ ಪೂರ್ಣಪ್ರಮಾಣದ ಸಂಭಾಷಣೆ ರಚಿಸುವುದರ ಜೊತೆಗೆ ಚಿತ್ರದ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದು ಶಿವಮೊಗ್ಗದ ಶ್ರೀವತ್ಸ ಪಿಎಂ ಇವರೊಂದಿಗೆ ಸಂಕಲನದಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ.

ಚಿತ್ರದ ಮತ್ತೊಂದು ವಿಶೇಷವೆಂದರೆ ಮುಖ್ಯಪಾತ್ರದಾರಿ ವಿಜಯ ರಾಘವೇಂದ್ರರವರನ್ನು ಹೊರತುಪಡಿಸಿ ಬಹುತೇಕ ಶಿವಮೊಗ್ಗದ ರಂಗಭೂಮಿ ಕಲಾವಿದರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಶಿವಮೊಗ್ಗ ರಂಗಭೂಮಿಯ ಚಿರಪರಿಚಿತ ಕಲಾವಿದರಾದ ಶ್ರೀಹರ್ಷ ಗೋಭಟ್ ನೀನಾಸಂ, ನಾಗರಾಜ್ ಶಿವಮೊಗ್ಗ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಇನ್ನುಳಿದಂತೆ ಚೇತನ್ ರಾಯನಹಳ್ಳಿ, ಮಂಜು ಭಗತ್ ಇನ್ನೂ ಅನೇಕ ಶಿವಮೊಗ್ಗ- ಮಂಗಳೂರಿನ ಸ್ಥಳೀಯ ಕಲಾವಿದರು ತಂತ್ರಜ್ಞರು ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.

ಒಂದು ತಿಂಗಳ ಅವಧಿಯೊಳಗೆ ಚಿತ್ರದ ಸಂಪೂರ್ಣ ಚಿತ್ರೀಕರಣ ತೀರ್ಥಹಳ್ಳಿ ಹಾಗೂ ಆರ್ಗ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆವೇರಿದ್ದು ಇದೀಗ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

ಚಿತ್ರದ ಫಸ್ಟ್‌ ಲುಕ್ ಇದೀಗ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸುತ್ತಿದ್ದು ಇನ್ನುಳಿದಂತೆ ಚಿತ್ರದ ಬಿಡುಗಡೆ ಹಾಗೂ ಮುಂದಿನ ಬೆಳವಣಿಗೆಗಳ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವುದಾಗಿ ಚಿತ್ರತಂಡ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaMalgudi DayssandalwoodShimogaShivamoggaShivamogga NewsSitaram BinoyU turnVijaya Raghavendraಮಾಲ್ಗುಡಿ ಡೇಸ್ವಿಜಯ ರಾಘವೇಂದ್ರಶಿವಮೊಗ್ಗಸೀತಾರಾಮ್ ಬಿನೋಯ್
Share237Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ದಸರಾಗೆ ತೆರೆ: ಒಂದೇ ಬಾರಿಗೆ ಬನ್ನಿ ತುಂಡಾಗಲಿಲ್ಲ, ರಾವಣ ಪೂರ್ತಿ ಉರಿಯಲಿಲ್ಲ

Next Post

Signatures Campaign to censure Kisan and Labour Bills of BJP: H C Yogesh

kalpa News

kalpa News

Next Post
Signatures Campaign to censure Kisan and Labour Bills of BJP: H C Yogesh

Signatures Campaign to censure Kisan and Labour Bills of BJP: H C Yogesh

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL