ಕೊಪ್ಪಳ: ರಾಜ್ಯದಾದ್ಯಂತ ನಾಡಹಬ್ಬವನ್ನು ಆಚರಿಸುತ್ತಿರುವಂತೆ, ಜಿಲ್ಲೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿಯೂ ಸಹ ಅದ್ದೂರಿಯ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕಾರ್ಖಾನೆಯ ಆಡಳಿತ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂಪೆನಿಯ ಕಾರ್ಖಾನೆಯ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಹಿರಿಯ ಅಧಿಕಾರಿ ಪಿ. ನಾರಾಯಣ ಅವರು ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷವೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆಗಳು ಮತ್ತು ಕನ್ನಡ ರಸಪ್ರಶ್ನೆ ಸ್ಪರ್ಧೆಗಳನ್ನು ಉದ್ಯೋಗಿಗಳಿಗೆ ಆಯೋಜಿಸಲಾಗಿತ್ತು. ಅದರಲ್ಲಿ ವಿಜೇತರಾದ ಉದ್ಯೋಗಿಗಳಿಗೆ ನವಂಬರ್ ತಿಂಗಳಿನಲ್ಲಿ ಒಂದು ದಿನದ ಕಾರ್ಯಕ್ರಮವನ್ನು ಮಾಡುವುದರ ಮೂಲಕ ವಿಜೇತರಿಗೆ ಬಹುಮಾನ ಕೊಡುವಂತಹ ಕಾರ್ಯಕ್ರಮ ಇರುತ್ತದೆ ಆ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕರು ಗುತ್ತಿಗೆ ಕೆಲಸಗಾರರು, ಭದ್ರತಾ ಸಿಬ್ಬಂದಿ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

(ವರದಿ: ಮುರಳೀಧರ್ ನಾಡಿಗೇರ್, ಕೊಪ್ಪಳ)
Get In Touch With Us info@kalpa.news Whatsapp: 9481252093, 94487 22200










Discussion about this post