ಬೆಂಗಳೂರು: ನಾಡಿನ ಹಬ್ಬ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕನ್ನಡ ಧ್ವಜಾರೋಹಣ ನೆರವೇರಿಸಿದರು.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಹಾಡಲಾಯಿತು. ತದನಂತರ ಕನ್ನಡ ನಾಡ ಧ್ವಜಾರೋಹಣ ಮಾಡಿದರು.
ಮುಖ್ಯಮಂತ್ರಿ @BSYBJP ಅವರು #ಕನ್ನಡರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಮೇಳ – ಕಾರ್ಯಕ್ರಮವನ್ನೂ ಉದ್ಘಾಟಿಸಿದರು.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ @nimmasuresh ಉಪಸ್ಥಿತರಿದ್ದರು. pic.twitter.com/zrRoeyBkuP
— CM of Karnataka (@CMofKarnataka) November 1, 2019
12 ಶಾಲೆಯ ಮಕ್ಕಳು ಪಥಸಂಚಲನ ನಡೆಸಿ, ಗೌರವ ವಂದನೆ ಸಲ್ಲಿಸಿದರು. ಬಳಿಕ ಸುಮಾರು 7200 ವಿದ್ಯಾರ್ಥಿಗಳು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಸಚಿವ ಸುರೇಶ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Discussion about this post