ಕಲ್ಪ ಮೀಡಿಯಾ ಹೌಸ್ | ಕರಾಚಿ |
ನವದೆಹಲಿಯಿಂದ ದೋಹಾಕ್ಕೆ ತೆರಳುತ್ತಿದ್ದ ಭಾರತದ ಇಂಡಿಗೋ ವಿಮಾನ Indigo plane ಪಾಕಿಸ್ಥಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ.
ವಿಮಾನದಲ್ಲಿದ್ದ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರಿಗೆ ತುರ್ತು ಭೂಸ್ಪರ್ಶ ಮಾಡಲಾಯಿತು. ಆದರೆ, ದುರಾದೃಷ್ಟವಷಾತ್ ಅವರಿಗೆ ಚಿಕಿತ್ಸೆ ನೀಡುವ ಮುನ್ನವೇ ಅವರ ಕೊನೆಯುಸಿರೆಳೆದಿದ್ದರು.
Also read: ತೆಲುಗಿನ `ನಾಟು ನಾಟು` ಹಾಡಿಗೆ ಆಸ್ಕರ್ ಪ್ರಶಸ್ತಿ: ಐತಿಹಾಸಿಕ ಸಾಧನೆ ಮಾಡಿದ ಭಾರತ
ಪ್ರಯಾಣಿಕರೊಬ್ಬರಿಗೆ ತೀವ್ರ ಅನಾರೋಗ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆ ನೀಡಲು, ತುರ್ತು ಲ್ಯಾಂಡಿAಗ್ ಮಾಡಲು ಅನುಮತಿ ನೀಡಬೇಕು ಎಂದು ಪೈಲೆಟ್ ಮಾಡಿದ ಮನವಿಯನ್ನು ಪಾಕಿಸ್ಥಾನದ ವಾಯುಯಾನ ಇಲಾಖೆ ಮಾನವೀಯತೆ ದೃಷ್ಠಿಯಿಂದ ಪುರಸ್ಕಾರ ಮಾಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post