ಕಲ್ಪ ಮೀಡಿಯಾ ಹೌಸ್ | ಕರಾಚಿ (ಪಾಕಿಸ್ತಾನ) |
ಮುಂಬೈ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ Dawood Ibrahim ವಿಷಪ್ರಾಶನವಾಗಿರುವ ಹಿನ್ನೆಲೆ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಭಾರತಕ್ಕೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂಗೆ ವಿಷಪ್ರಾಶನವಾಗಿ ಹಠಾತ್ ಆರೋಗ್ಯ ಕೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ.
ದಾವೂದ್ ಕಳೆದ ಎರಡು ದಿನಗಳಿಂದ ಆಸ್ಪತ್ರೆಂಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾನೆ ಎನ್ನಲಾಗಿದ್ದು, ಆಸ್ಪತ್ರೆಯ ಸುತ್ತಲೂ ಭಿಗಿ ಭದ್ರತೆ ಒದಗಿಸಲಾಗಿದೆ ಹಾಗೂ ದಾವೂದ್ ಇಬ್ರಾಹಿಂ ಆಸ್ಪತ್ರೆಯ ಮಹಡಿಯಲ್ಲಿ ಏಕೈಕ ನಿವಾಸಿಯಾಗಿದ್ದು, ಉನ್ನತ ಆಸ್ಪತ್ರೆ ಅಧಿಕಾರಿಗಳು ಮತ್ತು ಆತನ ಹತ್ತಿರದ ಕುಟುಂಬ ಸದಸ್ಯರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ. ಇನ್ನು ದಾವೂದ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಭೀಕರ ಮುಂಬೈ ಸ್ಫೋಟದ Mumbai Blast ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ, ಭಾರತಕ್ಕೆ ಬೇಕಾದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಎನಿಸಿಕೊಂಡಿದ್ದಾನೆ. 1993 ರಲ್ಲಿ ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಅಮಾಯಕ ನಾಗರಿಕರು ಮೃತಪಟ್ಟು, ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post