ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಮಂದಿನ ಸವಾಲಿನ ದಿನಗಳಲ್ಲಿ ವಸ್ತುನಿಷ್ಠ ವರದಿ ಬಹಳ ಮುಖ್ಯವಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಅಬ್ಬಕ್ಕ ಕ್ವೀನ್ ಕ್ರೂಸ್‌ನಲ್ಲಿ ನಡೆದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕಾ ರಂಗದಲ್ಲಿ ವಸ್ತುನಿಷ್ಠ ವರದಿಗಳು ಮುಖ್ಯವಾಗುತ್ತವೆ. ಬದಲಾಗಿ ಕಟ್ ಪೇಸ್ಟ್ ಪ್ರವೃತ್ತಿಗಳು ಎಂದಿಗೂ ಸರಿಯಾದುದಲ್ಲ. ಇಂದಿನ ಯುವ ಪತ್ರಕರ್ತರು ತನಿಖಾ ಹಾಗೂ ವಾಸ್ತವ ಆಧಾರಿತ ವರದಿಗಳಿಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಶಾಸಕ ವೇದವ್ಯಾಸ ಕಾಮತ್ ಅತಿಥಿಯಾಗಿದ್ದರು. ಹಿರಿಯ ಪತ್ರಕರ್ತರಾದ ರಿಚರ್ಡ್ ಲಸ್ರಾದೊ, ಜನಾರ್ದನ ಎಸ್. ಪುರಿಯ, ಆರ್.ಎನ್. ಪೂವಣಿ ಉಜಿರೆ, ರಾಜಾ ಬಂಟ್ವಾಳ್, ಹಮೀದ್ ವಿಟ್ಲ, ಜಯಪ್ರಕಾಶ್ ಕುಕ್ಕೇಟಿ, ಯು.ಎಲ್. ಉದಯಕುಮಾರ್ ಮತ್ತು ವಿ4 ನ್ಯೂಸ್‌ನ ಆಡಳಿತ ನಿರ್ದೇಶಕ ಲಕ್ಷ್ಮಣ್ ಕುಂದರ್ ಅವರನ್ನು ಸನ್ಮಾನಿಸಲಾಯಿತು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಸಮಿತಿ ಬೆಳೆದುಬಂದ ಹಾದಿ ಬಗ್ಗೆ ವಿವರಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ರಾಜ್ಯ ಅಧ್ಯಕ್ಷ ಬಿ. ನಾರಾಯಣ, ಕೆಜೆಯು ಬೆಂಗಳೂರು ಗೌರವಾಧ್ಯಕ್ಷ ಕೆ.ವಿ. ರಾಜೇಂದ್ರ ಕುರ್ಮಾ, ಪ್ರಧಾನ ಕಾರ್ಯದರ್ಶಿ ನರೇಂದ್ರನಾಥ್, ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಉಪಾಧ್ಯಕ್ಷ ಈ.ಟಿ. ಕೇರ್ ರಾಜು, ಕೆಜೆಯು ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಕೆ.ಜಯಕುಮಾರ್, ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಸಮಿತಿಯ ಕೋಶಾಧಿಕಾರಿ ಜ್ಯೋತಿಪ್ರಕಾಶ್ ಪುಣಚ, ಜತೆ ಕಾರ್ಯದರ್ಶಿ ಈಶ್ವರ ವಾರಣಾಸಿ, ಉಪಾಧ್ಯಕ್ಷ ಗಿರಿಧರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ, ಗೌತಮ್ ಶೆಟ್ಟಿ ಉಪಸ್ಥಿತರಿದ್ದರು. ಕೆಜೆಯು ದ.ಕ. ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post