ಕಲ್ಪ ಮೀಡಿಯಾ ಹೌಸ್ | ಕಾರವಾರ |
ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ #Hubli-Ankola National Highway ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಮೀಥೇನ್ ಸೋರಿಕೆಯಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಅಂಕೋಲಾದ ಕಂಚಿನ ಬಾಗಿಲು ಬಳಿ ಮಂಗಳವಾರ ನಡೆದಿದೆ.
ಟ್ಯಾಂಕರ್ ಗುಜರಾತ್ ನಿಂದ ಹುಬ್ಬಳ್ಳಿ-ಯಲ್ಲಾಪುರ ಮೂಲಕ ಉಡುಪಿಗೆ ಸಾಗುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಪರಿಣಾಮ ಮಹಾರಾಷ್ಟ್ರ ಮೂಲದ ಚಾಲಕ ಅರುಣ್ ಶೇಖ್ (57) ಗಂಭೀರವಾಗಿ ಗಾಯಗೊಂಡಿದ್ದು,ಅವರು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಭವಿಸಿದ ಒಂದು ಕಿಮೀ ವ್ಯಾಪ್ತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಹಾಗೂ ವಾಹನಗಳ ಓಡಾಟ, ವಾಹನಗಳ ನಿಲುಗಡೆ ನಿರ್ಬಂಧಿಸಿ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post