ಕಲ್ಪ ಮೀಡಿಯಾ ಹೌಸ್ | ಕಾರವಾರ |
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದು ಮಧ್ಯಾಹ್ನದ ನಂತರ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಮಧ್ಯಾಹ್ನ 1 ಗಂಟೆ ನಂತರ ಗುಡುಗು-ಮಿಂಚಿನಿಂದ ಕೂಡಿದ ಅಸಾಧಾರಣ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಲಾಗಿದೆ.
ಇಂದು ಎಲ್ಲೆಲ್ಲಿ ಅಲರ್ಟ್?
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ದಾವಣಗೆರೆ, ಗದಗ, ಧಾರವಾಡ, ರಾಯಚೂರು ಹಾಗೂ ಗುಲ್ಬರ್ಗಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 7ರ ನಾಳೆ ಶುಕ್ರವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಶಿವಮೊಗ್ಗ, ಬೆಳಗಾಂ, ಧಾರವಾಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 8ರ ಶನಿವಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾಂ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 9ರ ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಈ ಭಾಗಗಳಲ್ಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















