ಕಲ್ಪ ಮೀಡಿಯಾ ಹೌಸ್ | ಕರೀಂಗಂಜ್ |
ನಿಗದಿತ ಅವಧಿಗೂ ಮುನ್ನವೇ ಸಿಸೇರಿಯನ್ ಮಾಡಿದ ವೈದ್ಯರು, ಇನ್ನೂ ಬೆಳೆಯದ ಭ್ರೂಣವನ್ನು ಕಂಡು ಮತ್ತೆ ಹೊಲಿಗೆ ಹಾಕಿದ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಗೆ ನಿಗದಿತ ದಿನಾಂಕಕ್ಕೂ ಮೂರು ತಿಂಗಳ ಮೊದಲು ಸಿಸೇರಿಯನ್ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆದರೆ, ಈ ವೇಳೆ ಭ್ರೂಣ ಇನ್ನೂ ಬೆಳವಣಿಗೆ ಆಗಿದೇ ಇದ್ದುದನ್ನು ಕಂಡು ಮತ್ತೆ ಹೊಲಿಗೆ ಹಾಕಿದ್ದಾರೆ. ವೈದ್ಯರು ಈ ವಿಷಯವನ್ನು ಮುಚ್ಚಿಡಲು ಪ್ರಯತ್ನಿಸಿ, ಮಹಿಳೆಯ ಕುಟುಂಬಕ್ಕೂ ಯಾರೊಂದಿಗೂ ಚರ್ಚಿಸದಂತೆ ಕೇಳಿಕೊಂಡಿದ್ದರು. ಆದರೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಮಹಿಳೆಯ ಆರೋಗ್ಯ ಹದಗೆಟ್ಟಾಗ ಆಕೆಯ ಸಂಬಂಧಿಕರು ಮತ್ತು ನೆರೆಹೊರೆಯವರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ.
ಘಟನೆ ಕುರಿತಂತೆ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಸತ್ಯಾಸತ್ಯತೆಯನ್ನು ತಿಳಿಯಲು ವಿಚಾರಣೆ ನಡೆಸುತ್ತಿದ್ದಾರೆ. ತನಿಖಾ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿರುವುದಾಗಿ ವರದಿಯಾಗಿದೆ.
Also read: ಸರ್ಕಾರಿ ಶಾಲೆಯ ಶೌಚಾಲಯದ ಬಳಿ ನವಜಾತ ಶಿಶು ಶವ ಪತ್ತೆ: ತಾಯಿ ಯಾರು ಗೊತ್ತಾ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















