ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ಸನ್ಮಾನ ಮಾಡಲಾಯಿತು.
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಸ್ಮಿತಾ ಡಿ’ಮೆಲ್ಲೊ, (ಪಿಸಿಎಂಬಿ), ಅಂಕಿತ್ ಸುಧಾಳ (ಪಿಸಿಎಂಸಿ) ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿರುವುಲ್ಲದೆ ರಾಜ್ಯಮಟ್ಟದಲ್ಲಿ ಕ್ರಮವಾಗಿ ಆರು ಮತ್ತು ಎಂಟನೇ ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ.
Also read: ದೇಶದಲ್ಲೇ ಪ್ರಪ್ರಥಮ ಬಾರಿಗೆ ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಹಸಿರು ನಿಶಾನೆ
ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಮಾತ್ರ ವಿಜ್ಞಾನದ ನಾಲ್ಕು ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದು ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.
ಉಡುಪಿಯ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ನಡೆದ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರದಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post