ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಪ್ರತಿ ಮಕ್ಕಳು ಪ್ರತಿಭಾಸಂಪನ್ನರಾಗಿ, ಭಾರತದ ಭವಿಷ್ಯದ ವಿಜ್ಞಾನಿಗಳಾದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮೂಡಿಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮೂಡಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ವಿನಯ್ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆ ಅವರು ಮಾತನಾಡಿ, ಮೊದಲು ಭೂಮಿಯನ್ನು ಉಳಿಸುವ ಕಡೆಗೆ ಗಮನ ಹರಿಸುವುದು ಈಗಿನ ಅಗತ್ಯತೆ, ಅದರೊಂದಿಗೆ ತಂತ್ರಜ್ಞಾನವನ್ನು ಬಳಸಿ ಮಕ್ಕಳಲ್ಲಿ ವಿಜ್ಞಾನದೊಂದಿಗೆ ಪರಿಸರ ಎನ್ನುವ ಮನೋಭಾವವಿರಬೇಕು ಎಂದು ಹೇಳಿದರು.

ಸಂಸ್ಥೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ರೇಚಲ್ ಡಿಸೋಜ ಸ್ವಾಗತಿಸಿ, ಹತ್ತನೇ ತರಗತಿಯ ಸುಧೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಒಂಬತ್ತನೇ ತರಗತಿಯ ಶಹನುಂ ಫಾತಿಮಾ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post