ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕಾರ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕ್ರೈಸ್ಟ್‌ಕಿಂಗ್ Christ King ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ ದೊರೆತಿದ್ದು, ಐವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾವಳಿಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗು ಪ್ರಾಥಮಿಕ ಶಾಲೆಯ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಒಂಬತ್ತನೇ ತರಗತಿಯ ಸಾವನ್ ವರ್ಮ (ಪ್ರಥಮ ಸ್ಥಾನ), ಹತ್ತನೇ ತರಗತಿಯ ಆಶೀಶ್ ರಾವ್ (ನಾಲ್ಕನೇ ಸ್ಥಾನ), ಎಂಟನೇ ತರಗತಿಯ ಝುಬೇದ ಹುಸೇನ್ (ಪ್ರಥಮ ಸ್ಥಾನ), ಏಳನೇ ತರಗತಿಯ ವರುಣ್ ಕಾಮತ್ (ಪ್ರಥಮ ಸ್ಥಾನ) ಮತ್ತು ಅಶ್ವಿನ್ (ತೃತೀಯ ಸ್ಥಾನ) ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Also read: ಜು.30ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಾಸಾದ್, ಪ್ರಕಾಶ್ ನಾಯ್ಕ್ ತಂಡದ ನೇತೃತ್ವ ವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















