ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Also read: ಪ್ರಸ್ತುತ ಬೆಳವಣಿಗೆಗಳು ರಾಜ್ಯದಲ್ಲಿ ಬಿಜೆಪಿಯನ್ನು ದುರ್ಬಲಗೊಳಿಸುವ ಸಾಧ್ಯತೆ: ಕೆ.ಎಸ್. ಈಶ್ವರಪ್ಪ
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ, ರೆಂಜಾಳ ಇಲ್ಲಿ ನಡೆದ ಪ್ರಾಥಮಿಕ ವಿಭಾಗದ ಏಳನೇ ತರಗತಿಯ ಮೌಲ್ಯ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ವರುಣ್ ಕಾಮತ್ ಪ್ರಥಮ ಸ್ಥಾನ, ಒಂಬತ್ತನೇ ತರಗತಿಯ ಸೋಹನ್ ತೃತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ತಂಡದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















