ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾವಳಿ ಕಾರ್ಕಳದ ಕ್ರೈಸ್ಟ್‌ಕಿಂಗ್ Christ King ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವುಗಳ ಆಶ್ರಯದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕಂಬದಕೋಣೆ ಬೈಂದೂರಿನಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದು, ಮುಂದೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ವರುಣ್ ಕಾಮತ್ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
Also read: ಹಸಿರು ಶಕ್ತಿಗಾಗಿ ಜೈವಿಕ ಇಂಧನದ ಬಳಕೆ ಹೆಚ್ಚಾಗಬೇಕಿದೆ: ಡಾ.ಎಲ್.ಕೆ. ಶ್ರೀಪತಿ ಅಭಿಪ್ರಾಯ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















