No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಸಮಾಜದಲ್ಲಿ ಶಾಂತಿಯಿಂದ ಬದುಕಲು ಮಕ್ಕಳಿಗೆ ಸರಿಯಾದ ಸಂಸ್ಕಾರ ಅಗತ್ಯ: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

ಕ್ರೈಸ್ಟ್‌ಕಿಂಗ್: ಗ್ರೂಮಿಂಗ್ ಕ್ಲಾಸ್ ಹಾಗೂ ಕಿಚನ್ ಲ್ಯಾಬ್ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2025
in ಉಡುಪಿ
0
ಸಮಾಜದಲ್ಲಿ ಶಾಂತಿಯಿಂದ ಬದುಕಲು ಮಕ್ಕಳಿಗೆ ಸರಿಯಾದ ಸಂಸ್ಕಾರ ಅಗತ್ಯ: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಮಕ್ಕಳು ಮಾತೃಭಾಷೆಯನ್ನು ಪ್ರೀತಿಸಬೇಕು. ಹೊರ ಪ್ರಪಂಚದ ಅರಿವಿಗೆ ಮಕ್ಕಳು ಮಾತೃಭಾಷೆಯ ಜೊತೆಗೆ ಬೇರೆ ಭಾಷೆಗಳನ್ನೂ ಕಲಿಯಬೇಕು ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ವಿನೂತನ ಪರಿಕಲ್ಪನೆಯಾದ ‘ಗ್ರೂಮಿಂಗ್ ತರಗತಿ’ ಇದರ ಪಠ್ಯಪುಸ್ತಕ ಬಿಡುಗಡೆ ಹಾಗೂ ಕಿಚನ್ ಲ್ಯಾಬ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಗ್ರೂಮಿಂಗ್ ಪಠ್ಯಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಪತ್ರಿಕೆಗಳ ಅಂಕಣಗಳು, ಇತರ ಪುಸ್ತಕಗಳನ್ನು ಓದಿ ಜ್ಞಾನಿಗಳಾದಾಗ ಉತ್ತಮ ವ್ಯಕ್ತಿತ್ವ ಹೊಂದಲು ಸಾಧ್ಯ. ಮಕ್ಕಳಿಗೆ ಸರಿಯಾದ ಸಂಸ್ಕಾರ ಸಿಕ್ಕಾಗ ಸಮಾಜದಲ್ಲಿ ಶಾಂತಿಯಿಂದ ಬದುಕಲು ಸಾಧ್ಯ, ಈ ಸಂಸ್ಕಾರ ಶಾಲೆಗಳಲ್ಲಿ ಸಿಗಬೇಕು ಎಂದು ಹೇಳಿದರು.

ಕಿಚನ್ ಲ್ಯಾಬ್ ಉದ್ಘಾಟಕರಾಗಿ ಆಗಮಿಸಿದ್ದ ಕ್ರೈಸ್ಟ್‌ಕಿಂಗ್ ಚರ್ಚ್‌ನ ಧರ್ಮಗುರುಗಳಾದ ರೆ.ಫಾ.ಕ್ಲೆಮೆಂಟ್ ಮಸ್ಕರೇನ್ಹಸ್ ಅವರು ಮಾತನಾಡಿ, ನಾವು ನಮ್ಮನ್ನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು. ಆಗ ಬದುಕು ಸವಿಯಾಗುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ಆರಂಭಿಸಿರುವ ಈ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

http://kalpa.news/wp-content/uploads/2025/03/PES-Video.mp4

ಉದ್ಯಮಿ ವಿವೇಕಾನಂದ ಶೆಣೈ ಅವರು ಮಾತನಾಡಿ ತಂದೆ ತಾಯಿಯನ್ನು ಕೊನೆಗಾಲದಲ್ಲಿ ನೋಡಿಕೊಳ್ಳುವ ಕಾರ್ಯ ಪುಣ್ಯಫಲದಿಂದ ಬರುವಂತದ್ದು. ಮಕ್ಕಳು ತಮ್ಮ ತಂದೆ ತಾಯಿಯನ್ನು ಗೌರವಿಸುವುದು ಮಾತ್ರವಲ್ಲದೆ ವೃದ್ಧಾಪ್ಯದಲ್ಲಿಯೂ ಪ್ರೀತಿ ಗೌರವಗಳಿಂದ ನೋಡಿಕೊಳ್ಳಬೇಕು. ಅಂತಹ ಸಂಸ್ಕಾರ ಬೆಳೆಸುವ ಶಿಕ್ಷಣವನ್ನು ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ನೀಡುತ್ತಿದೆ ಎಂದು ಹೇಳಿದರು.

ಅತಿಥಿಗಳಾಗಿ ಆಗಮಿಸಿದ್ದ ಸ್ಕೌಟ್ ಮತ್ತು ಗೈಡ್ಸ್‌ನ ಕಾರ್ಕಳ ತಾಲೂಕು ಉಪಾಧ್ಯಕ್ಷೆ ಸಾವಿತ್ರಿ ಮನೋಹರ್, ಕಾರ್ಕಳ ಜೈನ್ ಮಿಲನ್ ಮಾಜಿ ಅಧ್ಯಕ್ಷೆ ಹಾಗೂ ನಿವೃತ್ತ ಆಂಗ್ಲಭಾಷಾ ಉಪನ್ಯಾಸಕಿ ಮಾಲತಿ ವಸಂತ್‌ರಾಜ್, ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷೆ ಹುಮೈರಾ ಸಂದರ್ಭೋಚಿತವಾಗಿ ಮಾತನಾಡಿ ಸಂಸ್ಥೆಯ ನೂತನ ಪರಿಕಲ್ಪನೆಯನ್ನು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ಪ್ರತೀ ಮಗುವೂ ಭಗವಂತನ ಪ್ರತೀಕ. ಮಕ್ಕಳು ವಿದ್ಯಾವಂತರಾದರೆ ಸಾಲದು ಪ್ರಜ್ಞಾವಂತರಾಗಬೇಕು. ಆಗ ದೇಶ ಸುಭಿಕ್ಷವಾಗಲು ಸಾಧ್ಯ. ಮಕ್ಕಳಿಗೆ ಧರ್ಮಾತೀತ, ಜಾತ್ಯಾತೀತ, ಮೇಲು ಕೀಳು ವರ್ಗರಹಿತ ಸಮಾನ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಧ್ಯೇಯ ಎಂದು ಹೇಳಿದರು.

ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಕುಂದರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ವಿಜೇತ ಸ್ವಾಗತಿಸಿ ಆಶಾಜ್ಯೋತಿ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೈಸ್ಟ್‌ಕಿಂಗ್ | ಹತ್ತನೇ ತರಗತಿಯಲ್ಲಿ ಅಮೋಘ ಫಲಿತಾಂಶ | 50 ವಿದ್ಯಾರ್ಥಿಗಳಿಗೆ ಉನ್ನತಶ್ರೇಣಿ

Next Post

ಪಹಲ್ಗಾಮ್‌ ದಾಳಿ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಹಲ್ಗಾಮ್‌ ದಾಳಿ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಪಹಲ್ಗಾಮ್‌ ದಾಳಿ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL