ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಹೆತ್ತವರ ಅತಿಯಾದ ನಿರೀಕ್ಷೆಗಳು ಮಕ್ಕಳಲ್ಲಿ ಒತ್ತಡ ಉಂಟುಮಾಡುವುದು ಸಹಜ. ಆದರೆ ಮಕ್ಕಳು ಇದನ್ನು ಸರಿಯಾಗಿ ನಿಭಾಯಿಸಲು ಪ್ರಯತ್ನಿಸಬೇಕು ಎಂದು ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋತಜ್ಞ ನಾಗರಾಜಮೂರ್ತಿ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹದಿಹರೆಯದ ಮನೋಸಮಸ್ಯೆಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಯಾವುದಾದರೂ ಒಳ್ಳೆಯ ಹವ್ಯಾಸವನ್ನು ರೂಢಿಸಿಕೊಂಡರೆ ಅದು ಒತ್ತಡವನ್ನು ಕಡಿಮೆ ಮಾಡುತ್ತದೆ. ತಮ್ಮ ದೇಹ, ಬಣ್ಣ-ಮೈಕಟ್ಟುಗಳ ಬಗ್ಗೆ ಅತಿಯಾದ ಯೋಚನೆಗಳನ್ನು ಬಿಡಬೇಕು, ಕೆಟ್ಟ ಚಟಗಳು ಭವಿಷ್ಯವನ್ನು ಹಾಳುಮಾಡುತ್ತದೆ. ಇಂತವುಗಳ ಕಡೆ ಮನಸ್ಸು ವಾಲದ ಹಾಗೆ ನೋಡಿಕೊಳ್ಳಬೇಕು ಎಂದುದರು.
ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪಾಚಾರ್ಯರು, ಉಪಪ್ರಾಚಾರ್ಯರು, ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಮೇಘಶ್ರಿ ಕಾರ್ಯಕ್ರಮ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post