ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕ್ರೈಸ್ಟ್‌ಕಿಂಗ್ ವಿದ್ಯಾಸಂಸ್ಥೆಯು ಅನೇಕ ಹೊಸ ಹೊಸ ಯೋಜನೆಗಳನ್ನು ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿರುವುದು ಸಂತೋಷದ ವಿಷಯವಾಗಿದೆ. ನೀವು ಅದರ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮ ಅದ್ದೂರಿಯಾಗಿ ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು. ದೀಪ ಬೆಳಗಿ ಮಕ್ಕಳ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನೋರ್ವ ಅತಿಥಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಕರಾಗಿರುವ ಶಿವರಾಮ್‌ಬಾಬು ಎಂ ಅವರು ಮಾತನಾಡಿ, ಪಾಠದ ಜೊತೆಗೆ ಕ್ರೀಡೆಗೆ ಕೂಡಾ ವಿದ್ಯಾರ್ಥಿಗಳು ಗಮನ ನೀಡಿದಾಗ ಅವರ ದೈಹಿಕ ಆರೋಗ್ಯ ಉತ್ತಮವಾಗಿರಲು ಸಾಧ್ಯ. ನೀವು ನಿಮ್ಮ ಆರೋಗ್ಯ ಉತ್ತಮವಾಗಿರಿಸಿಕೊಳ್ಳುವುದರ ಜೊತೆಗೆ ನಿಮ್ಮ ಮನೆಗಳಲ್ಲಿ ಒಂದೊಂದು ಗಿಡಗಳನ್ನು ನೆಟ್ಟು, ಬೆಳೆಸಿ ಪರಿಸರ ಸಂರಕ್ಷಣೆಯನ್ನು ಮಾಡಿ ಎಂದು ಕರೆ ನೀಡಿದರು.
ಕಾರ್ಕಳ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿರುವ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಎಳವೆಯಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.

ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್, ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಸಂಸ್ಥೆಯ ಆಪ್ತ ಸಮಾಲೋಚಕಿ ಸಿ.ಡಾ.ಶಾಲೆಟ್ ಸಿಕ್ವೇರಾ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ದಯಾನಂದ್ ಪದವಿಪೂರ್ವ ವಿಭಾಗ, ಸರಿಟಾ ನೊರೊನ್ಹ ಪ್ರೌಢಶಾಲಾ ವಿಭಾಗ ಹಾಗೂ ಉದಯರವಿ ಪ್ರಾಥಮಿಕ ವಿಭಾಗ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ, ಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ವಿವಿಧ ತಿಂಡಿ ತಿನಿಸುಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್, ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮುಂತಾದವುಗಳು ನಡೆಯಿತು. ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನ ಸ್ನೇಹಲತಾರವರು ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಆಂಗ್ಲಭಾಷಾ ಶಿಕ್ಷಕಿ ಆಲಿಸ್ ಲೋಬೋ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post