ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಪ್ರತಿಷ್ಟಿತ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ಹಾಗೂ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನವರು ಕೊಡಮಾಡುವ ಜಿಲ್ಲಾಮಟ್ಟದ ಪ್ರಶಸ್ತಿಗಳಾದ ಕ್ರೈಸ್ಟ್‌ಕಿಂಗ್ ಶಿಕ್ಷಕರತ್ನ ಹಾಗೂ ಕ್ರೈಸ್ಟ್‌ಕಿಂಗ್ ಕ್ರೀಡಾಶಿಕ್ಷಕಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು ಸರಕಾರಿ ಪ್ರೌಢಶಾಲೆ ರೆಂಜಾಳ ಇಲ್ಲಿನ ಮುಖ್ಯ ಶಿಕ್ಷಕಿ ಸ್ವರ್ಣಲತಾ ಕೆ ಇವರು ಈ ಸಾಲಿನ ಕ್ರೈಸ್ಟ್‌ಕಿಂಗ್ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕೊಡಮಾಡುವ ಕ್ರೈಸ್ಟ್‌ಕಿಂಗ್ ಕ್ರೀಡಾಶಿಕ್ಷಕಶ್ರೀ ಪ್ರಶಸ್ತಿಗೆ ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ನಿವೃತ್ತ ಯೋಧ ಫ್ರೆಡ್ರಿಕ್ ರೆಬೆಲ್ಲೊ ಅವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಶ್ರೀ ಲೋಕೇಶ್ ಸಿ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ, ಮಿಯ್ಯಾರು ಸಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post