ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ್‍ಯಾಂಕ್ ಪಡೆದ ಸುದೀಕ್ಷಾ ಶೆಟ್ಟಿ. ಎಂಟನೇ ರ್‍ಯಾಂಕ್ ಪಡೆದ ಚರಣ್‌ರಾಜ್, ನಾರಾಯಣಿ ಜಿ ಕಿಣಿ, ಒಂಬತ್ತನೇ ರ್‍ಯಾಂಕ್ ಪಡೆದ ಡ್ಯಾರೆಲ್ ವಿನೋಲ್ ಮೊರಾಸ್ ಹಾಗೂ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ್‍ಯಾಂಕ್ ಪಡೆದ ಅನಂತ್.ಎನ್.ಕೆ ಮತ್ತು ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಪ್ರಕೃತಿ ಪಿ ಗುಡಿಗಾರ್, ಎಂಟನೇ ರ್‍ಯಾಂಕ್ ಪಡೆದ ಆದಿಶ್ರೀ ಎಂ.ಆಚಾರ್ಯ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಕುಂದರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post