ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಮಕ್ಕಳ ಮನೋವಿಜ್ಞಾನ ಹಾಗೂ ಶೈಕ್ಷಣಿಕ ಮನೋವಿಜ್ಞಾನ ಕುರಿತಾದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಉಡುಪಿಯ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನಶಾಸ್ತ್ರಜ್ಞ ನಾಗರಾಜ ಮೂರ್ತಿ, ಸಮಾಲೋಚಕರಾದ ಸೌಜನ್ಯ ಶೆಟ್ಟಿ, ಪದ್ಮ ರಾಘವೇಂದ್ರ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಮಕ್ಕಳಲ್ಲಿ ಕಂಡು ಬರುವ ಮಾನಸಿಕ ತೊಂದರೆಗಳು, ಮಕ್ಕಳ ವರ್ತನೆ ಹಾಗೂ ಅದಕ್ಕೆ ಕಾರಣವಾಗುವ ವಿವಿಧ ಅಂಶಗಳು ಮತ್ತು ಈ ಸಂದರ್ಭಗಳಲ್ಲಿ ಶಿಕ್ಷಕರ ಜವಾಬ್ಧಾರಿ ಮುಂತಾದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.
ಸಂಸ್ಥೆಯ ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮೇರಿಯನ್ ಡಿಸೋಜ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post