ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ #Christ King PU College ಈ ಸಾಲಿನಲ್ಲಿ ಸಿಎ-ಫೌಂಡೇಷನ್, #CA Foundation ಸಿಎಸ್‌ಇಇಟಿ #CSEET ಉತ್ತೀರ್ಣರಾದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರಥಮ ಪ್ರಯತ್ನದಲ್ಲಿಯೇ ಸಿಎ-ಫೌಂಡೇಷನ್ ಉತ್ತೀರ್ಣನಾದ ಪ್ರಥೀತ್ ಆರ್ ಉಪಾಧ್ಯಾಯ, ಸಿಎಸ್‌ಇಇಟಿ ಉತ್ತೀರ್ಣರಾದ ಪ್ರಸಕ್ತ ಸಂಸ್ಥೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ನಾರಾಯಣಿ ಕಿಣಿ, ಪವನ್ ಪೂಜಾರಿ, ಚರಣ್‌ರಾಜ್, ಶ್ರೇಯಸ್ ಆಚಾರ್ಯ ಅವರಿಗೆ ಸಂಸ್ಥೆಯ ವತಿಯಿಂದ ಶಾಲು ಹಾಕಿ ಗೌರವಿಸಿ ಸನ್ಮಾನಿಸಲಾಯಿತು.
Also read: ಶಿವಮೊಗ್ಗ | ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ತಪಾಸಣೆ
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಿ.ಎಸ್.ಐ ಬೆಥಾನ್ಯ ದೇವಾಲಯ ಕಾರ್ಕಳ ಇಲ್ಲಿನ ಧರ್ಮಗುರುಗಳಾದ ರೆವರೆಂಡ್ ಸೊಲೊಮೋನ್ ಅವರು ಆಗಮಿಸಿದ್ದರು. ಕಾರ್ಕಳ ವೆಂಕಟರಮಣ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭ ಹೆಗ್ಡೆ, ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಕುಂದಾಪುರದ ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ನೀಲ್ ಗ್ಲಾಡ್ವಿನ್ ಡಿಲೀಮ, ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಡಿಸೋಜ, ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಉಪಪ್ರಾಚಾರ್ಯರಾದ ಡಾ. ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ರುಡಾಲ್ಫ್ ಕಿಶೋರ್ ಲೋಬೋ, ಸಂಸ್ಥೆಯ ವಿದ್ಯಾರ್ಥಿ ಸಮಾಲೋಚಕಿ ಸಿಸ್ಟರ್ ಡಾ.ಶಾಲೆಟ್ ಸಿಕ್ವೇರಾರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post