ಕಲ್ಪ ಮೀಡಿಯಾ ಹೌಸ್ | ಕಾರ್ಕಳ (ಮಂಗಳೂರು) |
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, (Karkala) ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ಬ್ಯಾಡ್ಮಿಂಟನ್ (Badminton) ಪಂದ್ಯಾಟ ನಡೆಯಿತು.
ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ತಂಡವು ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದೆ.
Also Read>> ಗೋಕರ್ಣ | ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ : ರಾಘವೇಶ್ವರ ಶ್ರೀ
Karkala : ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆ
ತಂಡವನ್ನು ಪ್ರತಿನಿಧಿಸಿದ ಆಟಗಾರ್ತಿಯರಾದ ಎಂಟನೇ ತರಗತಿಯ ಗ್ರಂಥ ಹಾಗೂ ಏಳನೇ ತರಗತಿಯ ಅಂಜನಿ ಕಾಮತ್ ಅವರು ವೈಯಕ್ತಿಕ ಪ್ರದರ್ಶನದ ಆಧಾರದಲ್ಲಿಯೂ ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ತಾಲೂಕು ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದಿರುವ ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









