ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಯಾವುದೇ ಒಂದು ಕಟ್ಟಡದ ನಿರ್ಮಾಣಕ್ಕೆ ಅಡಿಪಾಯ ಎಷ್ಟು ಮುಖ್ಯವೋ ಅದೇ ರೀತಿ ನಮ್ಮ ಜೀವನಕ್ಕೆ ಸಂವಿಧಾನದ ಮೌಲ್ಯಗಳು ಅಷ್ಟೇ ಮುಖ್ಯ ಎಂದು ರುಡಾಲ್ಫ್ ಕಿಶೋರ್ ಲೋಬೋ ತಿಳಿಸಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಜಯಂತಿಯನ್ನು #Ambedkar Jayanthi ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾಮತ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರುಡಾಲ್ಫ್ ಕಿಶೋರ್ ಲೋಬೋ ಹಾಗೂ ಪ್ರೌಢಶಾಲಾ ಶಿಕ್ಷಕಿ ಜೋಸ್ನಾ ಲತಾ ಉಪಸ್ಥಿತರಿದ್ದರು.
ಶಿಕ್ಷಕಿಯಾದ ರಮಿತಾ ಶೆಟ್ಟಿ ಸಂವಿಧಾನದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಮೀಕ್ಷಾ ಜೋಗಿ, ಸ್ವಾಗತವನ್ನು ಶೃತಿ ಶೆಟ್ಟಿ ಮತ್ತು ಧನ್ಯವಾದವನ್ನು ಉಮಾದೇವಿ ನೆರವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post