ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
‘ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎನ್ನುವುದು ಅತ್ಯಗತ್ಯವಾಗಿದೆ. ವಿದ್ಯೆಯಿಲ್ಲದವನು ಪಶುವಿಗೆ ಸಮಾನ. ಹಾಗಾಗಿ ಉತ್ತಮ ವಿದ್ಯೆಯನ್ನು ಕಲಿಯುವುದರ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಸಂಸ್ಕಾರವಂತರಾಗಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಖ್ಯಾತ ನ್ಯಾಯವಾದಿ ಸದಾನಂದ ಸಾಲ್ಯಾನ್ ಬೈಲೂರು ಹೇಳಿದರು.
ಕ್ರೈಸ್ಟ್ಕಿಂಗ್ Christ King ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಿಯಾರಿನ ಆಶಾ ನಿವಾಸ ಕಾನ್ವೆಂಟಿನ ಮುಖ್ಯಸ್ಥರಾದ ಡಾ. ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಮಾತನಾಡಿ, ವಿದ್ಯಾರ್ಥಿಗಳು ಎಳವೆಯಿಂದಲೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ನಾಯಕತ್ವದ ಗುಣ ಇದ್ದಾಗ ಮಾತ್ರ ಅವರು ತಮ್ಮ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.
Also read: ನಿರಂತರ ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ
ಮಿಯಾರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಂಜೀವ ದೇವಾಡಿ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಇದ್ದಾಗ ಅವರು ಭವಿಷ್ಯದ ಯಾವುದೇ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.
ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆಯವರು ಮಕ್ಕಳಿಗೆ ಪ್ರಮಾಣವಚನವನ್ನು ಬೋಧಿಸಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಮೇರಿಯನ್ ಡಿಸೋಜರವರು ಉಪಸ್ಥಿತರಿದ್ದರು.
ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಶರ್ವಿನ್ ಡಿಸೋಜ ಸ್ವಾಗತಿಸಿ, ಉಪನಾಯಕ ಕೀರ್ತನ್ ಡಿಸೋಜ ವಂದಿಸಿ, ವಿದ್ಯಾರ್ಥಿನಿಯರಾದ ಪ್ರಣತಿ ಮತ್ತು ಆದ್ಯ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post