ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಛೇರಿ ಉಡುಪಿ ಇದರ ವತಿಯಿಂದ ಉಡುಪಿಯ ವಿವಿಧ ಕಾಲೇಜುಗಳನ್ನು ಏಕಕಾಲದಲ್ಲಿ ನಡೆದ ಪದವಿಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಷಾನ ವಿಭಾಗದ ಸ್ಮೃತಿ ಮರಾಠೆ ಹಾಗೂ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಬ್ರೋವಿನ್ ಅಗೇರಾ ಪ್ರಥಮ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















