ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ತಂದೆ ತಾಯಿ ಮಕ್ಕಳಿಗಾಗಿ ಪಡುವ ಕಷ್ಟದ ಅರಿವು ಮಕ್ಕಳಿಗಿರಬೇಕು. ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಕ್ರೆ ಇಮಾಕ್ಯುಲೆಟ್ ಹಾರ್ಟ್ ಆಫ್ ಮೇರಿ ಚರ್ಚ್‌ನ ಧರ್ಮಗುರುಗಳಾದ ವಂ.ಫಾ. ಲೂಯಿಸ್ ಡೇಸಾ ಹೇಳಿದರು.
ಸಂಸ್ಥೆಯ ರೆ.ಫಾ.ಎಫ್.ಪಿ.ಎಸ್ ಮೋನಿಸ್ ಸಭಾಂಗಣದಲ್ಲಿ ನಡೆದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ಮಕ್ಕಳ ಭವಿಷ್ಯ ಚೆನ್ನಾಗಿರಬೇಕು ಎಂಬುದು ಪ್ರತಿಯೊಬ್ಬ ಹೆತ್ತವರ ಕನಸು. ಅದಕ್ಕೆ ಪೂರಕವಾಗಿ ಮಕ್ಕಳು ಸಾಧನೆ ಮಾಡಬೇಕು. ನಮ್ಮ ಸಂಸ್ಥೆಯಲ್ಲಿ ಪಕ್ಷಪಾತವಿಲ್ಲದೆ, ಬೇಧಭಾವ ರಹಿತ ಒತ್ತಡ ಮುಕ್ತ ಶಿಕ್ಷಣ ನೀಡಲಾಗುತ್ತದೆ ಎಂದು ಹೇಳಿದರು.
Also read: ಮಹಿಳಾ ಶಿಕ್ಷಣದಿಂದ ಮಾತ್ರ ಉತ್ತಮ ಸಮುದಾಯ ನಿರ್ಮಾಣ ಸಾಧ್ಯ: ಡಿಸಿ ಸೆಲ್ವಮಣಿ
ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಅವರು ಶೈಕ್ಷಣಿಕ ಯೋಜನೆಗಳು ಹಾಗೂ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು. ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್ ವಾಣಿಜ್ಯ ವಿಭಾಗಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಮೌನೇಶ್ವರ ಆಚಾರ್ಯ ಅವರು ವಿಜ್ಞಾನ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.
ರಸಾಯನ ಶಾಸ್ತ್ರ ಉಪನ್ಯಾಸಕಿ ಸೌಮ್ಯ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post