ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕಲಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳ ಕಡೆಗೂ ಮಕ್ಕಳು ಮಹತ್ವ ನೀಡಬೇಕು, ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಪ್ರಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕರ್ನಾಟಕ ಸರ್ಕಾರ ಹಾಗೂ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜು ಇವುಗಳ ಆಶ್ರಯದಲ್ಲಿ ಪದವಿಪೂರ್ವ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಹುಡುಗರ ಮತ್ತು ಹುಡುಗಿಯರ ವಿಭಾಗಗಳ ಫುಟ್ಬಾಲ್ ಪಂದ್ಯಾಟ ಗಾಂಧೀ ಮೈದಾನದಲ್ಲಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾರ್ಕಳ ಪುರಸಭೆಯ ಅಧ್ಯಕ್ಷ ಯೋಗೀಶ ದೇವಾಡಿ ದೀಪಬೆಳಗಿ ಪಂದ್ಯಾಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಪ್ರಕಾಶ್ ನಾಯ್ಕ್ ಸ್ವಾಗತಿಸಿ ಲಾವಣ್ಯ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣಪ್ರಸಾದ್ ಪಂದ್ಯಾಟ ಸಂಘಟಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post