ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಿಕ್ಷಣ ಎನ್ನುವುದು ಕೇವಲ ಜ್ಞಾನವಲ್ಲ, ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ ಎಂದು ನಿಟ್ಟೆಯ ಕೃಪಾ ಕಿರಣ್ ಫೈರಿಯ ಧರ್ಮಗುರುಗಳಾದ ಫಾ. ಮ್ಯಾಕ್ಸಿಂ ನಜರತ್ ಹೇಳಿದರು.
ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಯು ಬದುಕಿನಲ್ಲಿ ನಾಚಿಕೆಯ ಸ್ವಭಾವವನ್ನು ಬಿಟ್ಟು ಮುನ್ನಡೆದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ನ್ಯಾಯವಾದಿ ಕ್ಲಿಂಟನ್ ಕರ್ಡೋಜ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ರವರು ಹಾಗೂ ಕ್ಷೇತ್ರ ಸಂಯೋಜನಾಧಿಕಾರಿಗಳಾದ ಸಂತೋಷ್ ಕುಮಾರ್ ಶೆಟ್ಟಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Also read: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಪುಟ್ಟಣ್ಣ ಸಲ್ಲಿಕೆ
ಈ ಸಂದರ್ಭದಲ್ಲಿ ಕೀಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಮೇರಿಯನ್ ಡಿಸೋಜ, ಸಂಸ್ಥೆಯ ವಿದ್ಯಾರ್ಥಿ ಸಮಾಲೋಚಕಿ ಸಿಸ್ಟರ್ ಶಾರ್ಲೆಟ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಹೇಮಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post