ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಸಾಂಸ್ಖೃತಿಕ ಚಟುವಟಿಕೆಗಳು ಮನುಷ್ಯನ ಬೌದ್ಧಿಕ ಮತ್ತು ಮಾನಸಿಕ ವಿಕಸನಕ್ಕೆ ಸಹಕಾರಿ. ಇಂದಿನ ಮಕ್ಕಳು ಈ ಸಮಾಜದ ಭವಿಷ್ಯದ ಸಾಧಕರು. ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರು ಮಕ್ಕಳ ಸಾಂಸ್ಕೃತಿಕ ಆಸಕ್ತಿಗಳಿಗೆ ನೀರೆರೆದು ಪೋಷಿಸಬೇಕು ಎಂದು ಮೂಡಬಿದಿರೆಯ ಪಿಂಗಾರ ಕಲಾವಿದೆರ್ ಕಲಾಸಂಸ್ಥೆಯ ನಿರ್ದೇಶಕ ರಂಗಭೂಷಣ ಮಣಿ ಕೋಟೆಬಾಗಿಲು ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ದೀಪ ಬೆಳಗಿ ಚಾಲನೆ ನೀಡಿ, ಮಾತನಾಡಿದರು.

ಸಂಸ್ಥೆಯ ಮುಖ್ಯಶಿಕ್ಷಕರಾದ ರುಢಾಲ್ಫ್ ಕಿಶೋರ್ ಲೋಬೊ ಅವರು ಮಾತನಾಡಿ, ಪ್ರತಿಯೊಂದು ಮಗುವೂ ವಿಶಿಷ್ಟವಾದ ಪ್ರತಿಭೆಯನ್ನು ಹೊಂದಿದ್ದು ನುರಿತ ತರಬೇತುದಾರರಿಂದ ಅಂತಹ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಹೇಳಿದರು.

ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಮೀಳಾ ಸ್ವಾಗತಿಸಿ ಉಮಾದೇವಿ ಮತ್ತು ಶಕೀಲಾ ಅವರು ಅತಿಥಿಗಳನ್ನು ಪರಿಚಯಿಸಿದರು. ದೀಪ್ತಿ ಕಾರ್ಯಕ್ರಮ ನಿರೂಪಿಸಿ ವಿಜೇತಾ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post