No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಿ: ಶಾಸಕ ಸುನೀಲ್ ಕುಮಾರ್ ಕರೆ

ಕ್ರೈಸ್ಟ್‌ಕಿಂಗ್: ಅದ್ದೂರಿಯಾಗಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ -2025

kalpa News by kalpa News
December 24, 2025
in ಉಡುಪಿ
0
ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಿ: ಶಾಸಕ ಸುನೀಲ್ ಕುಮಾರ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸುವುದು ಹಾಗೂ ಅದಕ್ಕೆ ನೀರೆರೆದು ಪೋಷಿಸುವುದು ಶಿಕ್ಷಕರ ಮತ್ತು ಹೆತ್ತವರ ಕರ್ತವ್ಯ. ಜೊತೆಗೆ ಸಮಾಜ ಕೂಡಾ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಸುನೀಲ್ ಕುಮಾರ್ #MLA Sunil Kumar ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ, ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು, #Christ King ಕಾರ್ಕಳ ಇವರ ಜಂಟಿ ಸಹಯೋಗದಲ್ಲಿ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ #Prathibha Karanji ಮತ್ತು ಕಲೋತ್ಸವ-2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಕಳದ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ. ಇಂತಹ ಸಾಧನೆಗಳು ನಿರಂತರವಾಗಿ ಮುಂದುವರಿಯುತ್ತಿರಬೇಕು ಎಂದರು.

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, ಪ್ರಸಕ್ತ ಕಾಲಘಟ್ಟದಲ್ಲಿ ಮಕ್ಕಳ ನಿಯಂತ್ರಣ ಸವಾಲಿನದ್ದಾಗಿದೆ. ಮಕ್ಕಳನ್ನು ಸಂಸ್ಕಾರವಂತರಾಗಿ ಮಾಡಲು ಮೌಲ್ಯಯುತ ಶಿಕ್ಷಣ ಅಗತ್ಯ, ಮಕ್ಕಳಲ್ಲಿ ಪ್ರಜಾಪ್ರಭುತ್ವ ಭಾವನೆ ಬಲಗೊಳ್ಳುವಂತೆ ಮಾಡಬೇಕಾದುದು ನಮ್ಮ ಕರ್ತವ್ಯ ಎಂದು ಹೇಳಿದರು.

ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾತನಾಡಿ, ಪ್ರತಿಭಾ ಸಂಪನ್ನರಿಗೆ ಪ್ರತಿಭಾ ಕಾರಂಜಿ ಸಮರ್ಪಕ ವೇದಿಕೆ, ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನಕ್ಕೆ ಲಭ್ಯವಾಗುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಹೆಬ್ರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಂಕರ ಶೇರಿಗಾರ್ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಗಳನ್ನು ಹೊರಗೆಡವಲು ಅತ್ಯುತ್ತಮ ಅವಕಾಶ, ಶಿಕ್ಷಕರು ಹಾಗೂ ಪೋಷಕರು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಕ್ಕಳನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ, ಕಲೆ, ಸಾಹಿತ್ಯ, ಸಂಸ್ಕೃತಿಗಳು ಜನಮಾನಸದಲ್ಲಿ ಕಳೆಗುಂದುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ನಮ್ಮ ಮಕ್ಕಳ ಪಾಲಿಗೆ ಒದಗಿ ಬಂದಿರುವ ಸೌಭಾಗ್ಯ. ಮಕ್ಕಳು ಬಾಳೋದಕ್ಕೆ ಇರುವವರು ಬಳಲಳು ಅಲ್ಲ. ಮಕ್ಕಳು ಸಂತಸದಿಂದಿರಬೇಕು ಹೊರತು ಸಂಕಟದಿಂದಿರಬಾರದು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು.

ಅಂತಾರಾಷ್ಟ್ರೀಯ ಕ್ರೀಡಾಪಟು ಕ್ರೈಸ್ಟ್‌ಕಿಂಗ್‌ನ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮ ಹೆಗ್ಡೆ ಅವರನ್ನು ಭಾರತ್ ಸ್ಕೌಟ್ಸ್ ವತಿಯಿಂದ ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ಹತ್ತನೇ ತರಗತಿ ಪ್ರೇರಣಾ ಶಿಬಿರದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಇದಕ್ಕೆ ಕಾರಣಕರ್ತರಾದ ಇಲಾಖೆಯ ಕಳೆದ ಸಾಲಿನ ಸಿಆರ್‌ಪಿ ಬಾಲಕೃಷ್ಣ ಅವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು.

https://kalpa.news/wp-content/uploads/2024/04/VID-20240426-WA0008.mp4

ಸಭಾ ಕಾರ್ಯಕ್ರಮ ಆರಂಭಕ್ಕೂ ಮೊದಲು ಅತಿಥಿ ಗಣ್ಯರನ್ನ್ಲು ಗಾಂಧಿ ಮೈದಾನದಿಂದ ಚೆಂಡೆ, ಬ್ಯಾಂಡ್, ಕೊಂಬು ವಾದನದೊಂದಿಗೆ ಭವ್ಯ ಮೆರವಣಿಗೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ವಿವಿಧ ಮಹಾನ್ ನಾಯಕರ ಹಾಗೂ ವಿವಿಧ ಜನಪದ ವೇಷಗಳನ್ನು ತೊಟ್ಟು ಮನರಂಜಿಸಿದರು. ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ದಯಾನಂದ ಮಲೆಬೆಟ್ಟು, ಪ್ರೌಢಶಾಲಾ ವಿಭಾಗದ ಶೆರಿಟಾ ನೊರೋನ್ಹ, ಪ್ರಾಥಮಿಕ ವಿಭಾಗದ ಉದಯರವಿ, ಕಾರ್ಕಳ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಕಕ್ಷರಾದ ಆನಂದ, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ಶಿಕ್ಷಕರ ಸಂಘದ ಅಧ್ಕಕ್ಷರಾದ ರಮಾನಂದ ಶೆಟ್ಟಿ, ಉಡುಪಿ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಕಕ್ಷರಾದ ಕೊಂಡಳ್ಳಿ ಪ್ರಭಾಕರ, ಕಾರ್ಕಳ ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಕಕ್ಷರಾದ ಸಂಜೀವ ಪೂಜಾರಿ, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಕಕ್ಷರಾದ ದೇವದಾಸ್ ಪಾಟ್ಕರ್, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಕಕ್ಷರಾದ ವಸಂತ, ಕಾರ್ಕಳ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಕಕ್ಷರಾದ ಸಂತೋಷ್, ಕಾರ್ಕಳ ತಾಲೂಕು ಪ್ರಾಥಮಿಕಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಕಕ್ಷ ರವೀಂದ್ರ ಶೆಟ್ಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಂಘದ ಅಧ್ಯಕ್ಷರಾದ ಭುಜಂಗ, ಕಾರ್ಕಳ ತಾಲೂಕು ಅನುದಾನಿತ ಪ್ರಾಥಮಿಕಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಕಕ್ಷರಾದ ಪೃಥ್ವಿರಾಜ್ ಬಲ್ಲಾಳ್, ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ, ಬಿಆರ್‌ಸಿ ಉಮೆಶ್ ಕೆ.ಎಸ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಪಿಎಂ ಪೋಷಣಾ ಅಭಿಯಾನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಭಾಸ್ಕರ ಟಿ ಅವರು ಸ್ವಾಗತಿಸಿ ಕಾರ್ಕಳ ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಇಂದಿರಾ ವಂದಿಸಿದರು. ಹೊಸ್ಮಾರು ಸಿಆರ್‌ಪಿ ಕೃಷ್ಣಕುಮಾರ್ ವಿವಧ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                     

Tags: Christ Kingcoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreMLA Sunil KumarNews in KannadaNews KannadaPrathibha KaranjiUdupiಕಾರ್ಕಳಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಪ್ರತಿಭಾ ಕಾರಂಜಿಶಾಸಕ ಸುನೀಲ್ ಕುಮಾರ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಣಾತ್ಮಕ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಡಾ. ವೀರೇಂದ್ರ ಅಭಿಮತ

Next Post

ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ.ಜ್ಞಾನೇಶ್

kalpa News

kalpa News

Next Post
ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ.ಜ್ಞಾನೇಶ್

ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ.ಜ್ಞಾನೇಶ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL