ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಭಾರತ ದೇಶ ಇಂದು ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದೆ. ಯುವ ಜನತೆ ಬದ್ಧತೆಯಿಂದ ದೇಶಕ್ಕಾಗಿ ದುಡಿದಾಗ ನಮ್ಮ ದೇಶ ಇನ್ನೂ ಉನ್ನತಿಗೇರಲು ಸಾಧ್ಯ ಎಂದು ಭಾರತೀಯ ಸೇನೆಯ ನಿವೃತ್ತ ಸುಬೆದಾರ್ ಮೈಕಲ್ ಕ್ರಿಪ್ಸನ್ ಕರ್ಕಡ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 76ನೇ ಗಣರಾಜ್ಯೋತ್ಸವ #76th Republic Day ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಸಿ ಅವರು ಮಾತನಾಡಿದರು.
ಮಕ್ಕಳು ತಮ್ಮನ್ನು ತಾವು ಧನಾತ್ಮಕ ಬದಲಾವಣೆಗೆ ಒಳಪಡಿಸಿಕೊಳ್ಳಬೇಕು. ಅದೇ ರೀತಿ ಮಕ್ಕಳು ತಮ್ಮ ಶಾಲೆ, ಗುರುಗಳು, ತಂದೆ ತಾಯಿ ಹಾಗೂ ದೇಶವನ್ನು ಮರೆಯದೆ ಗೌರವದಿಂದ ಕಾಣಬೇಕು ಎಂದು ಹೇಳಿದರು.
ಸಂಸ್ಥೆಯ ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಒಂಬತ್ತನೇ ತರಗತಿಯ ಝುಬೇದ ಸ್ವಾಗತಿಸಿ ಕವನ ವಂದಿಸಿದರು. ಲೆನಿಶಾ ಮೆಂಡೋನ್ಸಾ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post