ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರಮಟ್ಟದ ಜೆಇಇ ಮೈನ್ – 2025 #JEE Main Exam ಪ್ರಥಮ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ದ್ವಿತೀಯ ವಿಜ್ಞಾನ ವಿಭಾಗದ ಅನಂತ್ ಎನ್. ಕೆ ಶೇ. 99.0927 ಪಡೆದುಕೊಳ್ಳುವುದರ ಮೂಲಕ ಸಂಸ್ಥೆಯು ಅಭೂತಪೂರ್ವ ಸಾಧನೆಗೈದಿದೆ.
ಭೌತಶಾಸ್ತ್ರದಲ್ಲಿ 98.6068, ರಸಾಯನಶಾಸ್ತ್ರದಲ್ಲಿ 99.3449, ಗಣಿತಶಾಸ್ತ್ರದಲ್ಲಿ 97.2966 ಅಂಕಗಳನ್ನು ಪಡೆದುಕೊಂಡು ಒಟ್ಟಾರೆ ಶೇ.99.0927 ಅಂಕಗಳನ್ನು ಪಡೆದುಕೊಂಡಿರುವ ಅನಂತ್ ಎನ್ ಕೆ ಸಂಸ್ಥೆಗೆ ಕೀರ್ತಿ ತಂದಿದ್ದಾನೆ.
Also read: ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ಹಲವು ರೈಲುಗಳು ಭಾಗಷಃ, ತಾತ್ಕಾಲಿಕ ರದ್ದು
ಸಂಸ್ಥೆಯಿಂದ ಒಟ್ಟು ಎಂಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ ಅನಂತ್ ಶೇ.99ಕ್ಕಿಂತ ಹೆಚ್ಚಿನ ಅಂಕ ಪಡೆದುಕೊಂಡಿರುವುದು ವಿಶೇಷ ಸಾಧನೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post