ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಕ್ರೈಸ್ಟ್ಕಿಂಗ್ Christ King ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳ ವಿದ್ಯಾರ್ಥಿಗಳು ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಜ್ಞಾನಸುಧಾ ಪ್ರೌಢಶಾಲೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಕರಾಟೆ ಸ್ವರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಆಯುಶ್ರೀ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಒಂಬತ್ತನೇ ತರಗತಿಯ ಸಾವನ್ ವರ್ಮ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಅದಿತಿ ದ್ವಿತೀಯ ಸ್ಥಾನ, ಶಗುನ್ ವರ್ಮ ತೃತೀಯ ಸ್ಥಾನ, ರಿತು ಪ್ರಾನ್ಸಿಸ್ ದ್ವಿತೀಯ ಸ್ಥಾನ, ಆರನೇ ತರಗತಿಯ ಅದ್ವೈತ್ ದ್ವಿತೀಯ ಸ್ಥಾನ, ಪ್ರೌಢ ಶಾಲಾ ವಿಭಾಗದಲ್ಲಿ ಏಳನೇ ತರಗತಿಯ ಅಬ್ದುಲ್ ಸಫ್ವಾನ್ ತೃತೀಯ ಸ್ಥಾನ, ಒಂಬತ್ತನೇ ತರಗತಿಯ ಸಮ್ಯಕ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
Also read: ಬೈಕ್ ರೇಸಿಂಗ್ ಮಾಡಿದ ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post