ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಆಂಗ್ಲಮಾದ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಸುದೀಕ್ಷಾ ರಾಜ್ಯಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಸಂತ ಫ್ರಾನ್ಸಿಸ್ ಆಂಗ್ಲಮಾಧ್ಯಮ ಶಾಲೆ ಉದ್ಯಾವರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 14/17ರ ವಯೋಮಿತಿಯ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಆಂಗ್ಲಮಾದ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಸುದೀಕ್ಷಾ ರಾಜ್ಯಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.
ಉಡುಪಿ ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಸುದೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಉಳಿದಂತೆ ಏಳನೇ ತರಗತಿಯ ಶಾರ್ವಿ ಹಾಗೂ ಎಂಟನೇ ತರಗತಿಯ ಅದ್ವಿತ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










