ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯದಲ್ಲಿ ಪಾಲ್ಗೊಂಡಿದ್ದ ಕ್ರೈಸ್ಟ್ ಕಿಂಗ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಾವನ್ ಎಸ್. ವರ್ಮಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಉಡುಪಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಜಂಟಿ ಆಶ್ರಯದಲ್ಲಿ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
Also read: ಕಾರ್ಕಳ | ಕ್ರೈಸ್ಟ್’ಕಿಂಗ್ | ಚೆಸ್’ನಲ್ಲಿ 2ನೇ ಬಾರಿ ರಾಜ್ಯ ಮಟ್ಟಕ್ಕೆ ವರುಣ್ ಕಾಮತ್ ಆಯ್ಕೆ
ರಾಜ್ಯ ಮಟ್ಟದ ಸ್ಪರ್ಧೆ ಮೈಸೂರಿನಲ್ಲಿ ನಡೆಯಲಿದ್ದು, ಈ ಪ್ರತಿಭಾನ್ವಿತ ಬಾಲಕ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post