ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಪ್ರತಿಷ್ಠಿತ ಕ್ರೈಸ್ಟ್ಕಿಂಗ್ #Christ King ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಕಣಂಜಾರು ಲರ‍್ಡ್ ಮಾತಾ ಚರ್ಚಿನ ಧರ್ಮಗುರುಗಳಾಗಿರುವ ರೆ.ಫಾ.ಹೆರಾಲ್ಡ್ ಪಿರೇರಾ ಅವರು ದೀಪ ಬೆಳಗಿ ನೂತನ ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಿದರು.

ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾಗಿರುವ ರಾಜೇಶ್ ಭಟ್ ಮಾತನಾಡಿ, ವಿದ್ಯಾರ್ಥಿಗಳು ನಿರಂತರವಾಗಿ ತಮ್ಮನ್ನು ತಾವು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ತಮ್ಮ ಜವಾಬ್ದಾರಿಯನ್ನು ತಾವೇ ಅರಿತು ತಮ್ಮ ಭವಿಷ್ಯದ ದಾರಿಯನ್ನು ತಾವೇ ಕಂಡುಕೊಳ್ಳಬೇಕು ಎಂದು ಹೇಳಿದರು.

Also read: Digitization of Material Gate Passes in VISP, Bhadravathi
ಕ್ರೈಸ್ಟ್ಕಿಂಗ್ ಎಜುಕೇಷನ್ ಟ್ರಸ್ಟ್ ಸದಸ್ಯ ಹಾಗೂ ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ನಮ್ಮ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ನಾವೇ, ಅದೇ ರೀತಿ ಮಕ್ಕಳು ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆಯುವುದರೊಂದಿಗೆ ಈ ಸಮಾಜದಲ್ಲಿ ಉತ್ತಮ ನಾಯಕರಾಗಿ ಮೂಡಿ ಬರಬೇಕು ಎಂದು ಕರೆ ನೀಡಿದರು.

ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮಿ ನಾರಾಯಣ ಕಾಮತ್, ಆಡಳಿತಾಧಿಕಾರಿ ವಿನಯ್ ಕುಮಾರ್, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರುಗಳಾದ ಪ್ರೌಢಶಾಲಾ ವಿಭಾಗದ ಹೇಮಲತಾ, ಪ್ರಾಥಮಿಕ ವಿಭಾಗದ ಪ್ರಕಾಶ್ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post